6

`ಜುಲೈ 1ರಿಂದ ಗ್ರಾಮೀಣ ಸ್ವಚ್ಛತೆ’

ಶಿರಸಿ: `ಜುಲೈ 1ರಿಂದ ಎಲ್ಲಾ ಗ್ರಾಮಗಳಲ್ಲಿನ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಬೇಕು. ಶಾಲೆ, ಬಸ್ ನಿಲ್ದಾಣ, ಆರೋಗ್ಯ ಕೇಂದ್ರಗಳ ಸುತ್ತಲಿನ ವಾತಾವರಣ ಸ್ವಚ್ಛವಾಗಿರಬೇಕು’ ಎಂದು ಶಿರಸಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಹೆಗಡೆ ಅಧೀನ ಅಧಿಕಾರಿಗಳಿಗೆ ಸೂಚಿಸಿದರು.
ಬದನಗೋಡ ಹಾಗೂ ಅಂಡಗಿ ಗ್ರಾಮ ಪಂಚಾಯತಗೆ ಭೇಟಿ ನೀಡಿದ ಅವರು ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದರು. `ಕುಡಿಯುವ ನೀರು ಹಾಗೂ ಬಡವರಿಗೆ ಮನೆ ನೀಡುವ ವಿಷಯದಲ್ಲಿ ಲೋಪ ಆಗಬಾರದು’ ಎಂದು ಸೂಚಿಸಿದರು. ಬಾಕಿ ಇರುವ ಮನೆಕರ ವಸೂಲಿ ಮಾಡುವಂತೆ ತಿಳಿಸಿದರು. ನರೇಗಾ ಯೋಜನೆ, ಪ್ರೊಫೈಲ್ ಅಪಡೇಷನ್, ಇ-ಸ್ವತ್ತು, ಬಸವ ವಸತಿ ಮನೆ, ಕುಡಿಯುವ ನೀರು, ವಿಶೇಷ ಸ್ವಚ್ಛತಾ ಅಭಿಯಾನ ಸೇರಿದಂತೆ ವಸೂಲಾತಿ, ಕಾಮಗಾರಿಗಳ ದಾಖಲೆಗಳ ನಿರ್ವಹಣೆ, ವಿದ್ಯುತ್ ಬಿಲ್, ವಾಟರ್ ಟೆಸ್ಟ್ ಕುರಿತು ಸೂಚನೆಗಳನ್ನು ನೀಡಿದರು.
ತಾಲೂಕು ಪಂಚಾಯತ್ ವ್ಯವಸ್ಥಾಪಕ ಸುಬ್ರಾಯ ಭಟ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಪಿ ಲಮಾಣಿ ಹಾಗೂ ಪರಶುರಾಮ್ ಇತರರಿದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page