6

ತೆಂಗಿನಗೇರಿಗೆ ಬಸ್ ಬಂತು

ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ತೆಂಗಿನಗೇರಿ ಗ್ರಾಮಕ್ಕೆ ಯಲ್ಲಾಪುರದಿಂದ ಬಸ್ ಓಡಾಟ ಗುರುವಾರ ಆರಂಭಗೊಂಡಿದೆ.

ಗ್ರಾಮದಲ್ಲಿ ನೂತನ ಬಸ್ ಸಂಚಾರಕ್ಕೆ ಶಾಸಕ ಶಿವರಾಮ ಹೆಬ್ಬಾರ ಅವರು ಬಸ್ ಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.‌ ನಂತರ ಸ್ವಲ್ಪ ದೂರ ಬಸ್ ಬಲ್ಲಿ ಪ್ರಯಾಣಿಸಿದರು.

ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯದ ಓಡಾಟಕ್ಕೆ ಬಸ್ ಸಂಚಾರದಿಂದ ಅನುಕೂಲವಾಗಲಿದೆ. ಖಾಸಗಿ, ಬಾಡಿಗೆ ವಾಹನಗಳನ್ನು ಆಶ್ರಯಿಸಿ ಹೋಗಬೇಕಾದ ಬವಣೆ ತಪ್ಪಲಿದೆ.

ಬಸ್ ಸಂಚಾರ ಆರಂಭಕ್ಕೆ ಕಾರಣರಾದ ಶಾಸಕ ಶಿವರಾಮ ಹೆಬ್ಬಾರ ಹಾಗೂ ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ ಅವರನ್ನು ಗ್ರಾಮಸ್ಥರು ಗೌರವಿಸಿದರು.

ಬಸ್ ಘಟಕದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page