6

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ತಾಯಿ ಹೆಸರಿನಲ್ಲೊಂದು ಗಿಡ’ ಅಭಿಯಾನ

ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ‘ತಾಯಿ ಹೆಸರಿನಲ್ಲೊಂದು ಗಿಡ’ ಎಂಬ ವಿನೂತನ ಅಭಿಯಾನ ಮಂಗಳವಾರ ನಡೆಯಿತು.

ಕೇಂದ್ರ ಸರ್ಕಾರದ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಈ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ ಆರ್. ಡಿ. ಜನಾರ್ದನ ಮಾತನಾಡಿ, ಮನುಷ್ಯ ಹೆಚ್ಚು ಬುದ್ದಿವಂತನಾದಷ್ಟು ವನ್ಯ ಜೀವಿಗಳನ್ನು ಹಾಗೂ ಮರಗಿಡಗಳ ಮೇಲೆ ಪ್ರಾಬಲ್ಯ ಸಾಧಿಸಲು ಯತ್ನಿಸುತ್ತಾನೆ. ಆದರೆ ಭೂಮಿಯಲ್ಲಿ ಎಲ್ಲ ಜೀವಿಗಳಿಗೂ ಬದುಕುವ ಹಕ್ಕು ಇದೆ ಎಂಬುದನ್ನು ಅರಿಯಬೇಕು ಎಂದರು. ‌

ಡಿಸಿಎಫ್ ಹರ್ಷ ಭಾನು ಜಿ.ಪಿ ಮಾತನಾಡಿದರು. ಎಸಿಎಫ್ ಹಿಮವತಿ ಭಟ್ಟ, ಆರ್.ಎಫ್.ಒ ನರೇಶ್ ಜಿ.ವಿ, ಕ್ರಿಯೇಟಿವ್ ಕಂಪ್ಯೂಟರ್ ನ ಶ್ರೀನಿವಾಸ ಮುರ್ಡೇಶ್ವರ ಉಪಸ್ಥಿತರಿದ್ದರು. ಪತ್ರಾಂಕಿತ ವ್ಯವಸ್ಥಾಪಕ ಎನ್. ಬಿ ಮೆಣಸುಮನೆ ಸ್ವಾಗತಿಸಿದರು. ದ್ವಿತೀಯ ದರ್ಜೆ ಸಹಾಯಕ ಮಹಾದೇವಪ್ಪ ಹುಲಕೊಪ್ಪ ವಂದಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page