6

‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

ಕಾಮಿಡಿ ಕಿಲಾಡಿ‌ ಖ್ಯಾತಿಯ ಯುವ ಕಲಾವಿದ, ಯಲ್ಲಾಪುರ ತಾಲೂಕಿನ ಚಿಮನಳ್ಳಿಯ ಚಂದ್ರಶೇಖರ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತೇಲಂಗಾರ ಸಮೀದ ಚಿಮನಳ್ಳಿಯವರಾದ ಚಂದ್ರಶೇಖರ, ನೀನಾಸಂನಲ್ಲಿ ಅಭಿನಯ ಕಲಿತು ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

ಕೆಲ ವರ್ಷಗಳ ಹಿಂದೆ ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ತಮ್ಮ ನಟನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಅಲ್ಲದೇ ಕೆಲವು ಧಾರಾವಾಹಿಗಳಲ್ಲೂ ಸಣ್ಣಪುಟ್ಟ ಪಾತ್ರಗಳನ್ನು ನಿರ್ವಹಿಸಿದ್ದರು.

ತೇಲಂಗಾರಿನ ಮೈತ್ರಿ ಕಲಾ ಬಳಗದ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿದ್ದ ಚಂದ್ರಶೇಖರ, ಉತ್ತಮ ಯೋಗಪಟುವೂ ಆಗಿದ್ದರು.

ನಟನೆಯಲ್ಲಿ ಉತ್ತಮ ಭವಿಷ್ಯ ಹೊಂದಿದ್ದ ಯುವ ಕಲಾವಿದ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದದ ಸಂಗತಿ. ಇತ್ತೀಚಿನ ವರ್ಷಗಳಲ್ಲಿ ವಿವಿಧ ಟಿವಿ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಬರುತ್ತಿರುವ ಗ್ರಾಮೀಣ ಪ್ರತಿಭೆಗಳ ಬದುಕು ದುರಂತ ಅಂತ್ಯ ಕಾಣುತ್ತಿರುವುದು ವಿಪರ್ಯಾಸವಾಗಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page