6

‘ಶ್ರೀ ನ್ಯೂಸ್’ ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

ಯಲ್ಲಾಪುರದ ಮುಂಡಗೋಡ ರಸ್ತೆಯ ಪಕ್ಕ ಬಿ.ಎಸ್.ಎನ್.ಎಲ್ ವಸತಿಗೃಹ ಸಂಕೀರ್ಣದ ಎದುರು ವರ್ಷಗಳಿಂದ ಬಿದ್ದಿರುವ ಕಸದ ರಾಶಿಗೆ ಅಂತೂ ಮುಕ್ತಿ ಸಿಕ್ಕಿದೆ.

ರಾಶಿ, ರಾಶಿ ಕಸ ಬಿದ್ದಿದ್ದು, ಕಸದ ರಾಶಿಯ ನಡುವೆಯೇ ಕಸದ ತೊಟ್ಟಿಯೊಂದು ಬಿದ್ದುಕೊಂಡಿತ್ತು. ನೋಡುವವರಿಗೆ ಅದೂ ಕಸವೇ ಇರಬಹುದೆಂಬ ಭಾವನೆ ಮೂಡಿಸುವಂತಿತ್ತು. ಮಳೆಯ ನೀರೂ ಕಸದೊಂದಿಗೆ ಸೇರಿ ಸೊಳ್ಳೆಗಳ ಉಗಮ ಸ್ಥಾನವಾಗಿ ಮಾರ್ಪಟ್ಟಿತ್ತು. ಹಿರಿಯ ನಾಗರಿಕರ ವಿಶ್ರಾಂತಿಗಾಗಿ ಬೆಂಚ್ ಒಂದು ಅಲ್ಲಿದ್ದರೂ, ಕಸದ ಕಾರಣಕ್ಕಾಗಿ ಯಾರೂ ಅಲ್ಲಿ ಕುಳಿತುಕೊಳ್ಳುವಂತಿರಲಿಲ್ಲ.

ಈ ಸಮಸ್ಯೆ ಬಗ್ಗೆ ನಿನ್ನೆ ಸಂಜೆ ‘ಶ್ರೀ ನ್ಯೂಸ್’ ವರದಿ ಪ್ರಕಟಿಸಿತ್ತು. ಇದಕ್ಕೆ ತಕ್ಷಣ ಸ್ಪಂದಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನರ್ಮದಾ ನಾಯ್ಕ ಹಾಗೂ ಸ್ಥಳೀಯ ಸದಸ್ಯ ಸೋಮೇಶ್ವರ ನಾಯ್ಕ, ಕಸ ವಿಲೇವಾರಿಗೆ ಕ್ರಮ‌ ಕೈಗೊಂಡಿದ್ದಾರೆ.‌

ಸೋಮವಾರ ಬೆಳಗ್ಗೆ ಸ್ಥಳಕ್ಕೆ ಬಂದ ಸಿಬ್ಬಂದಿ ಕಸ ತೆಗೆದು ಸ್ವಚ್ಛಗೊಳಿಸಿದ್ದಾರೆ. ಕಸ ವಿಲೇವಾರಿ ವಾಹನದ ಮೂಲಕ ಎಲ್ಲ ಕಸವನ್ನು ವಿಲೇವಾರಿ ಮಾಡಲಾಗಿದೆ. ಕಸದ ರಾಶಿಯ ನಡುವೆ ಬಿದ್ದಿದ್ದ ಕಸದ ತೊಟ್ಟಿಯನ್ನೂ ಹೊತ್ತೊಯ್ದಿದ್ದಾರೆ.
ವರ್ಷಗಳಿಂದಾಗದ ಕಾರ್ಯ, ‘ಶ್ರೀ ನ್ಯೂಸ್’ ನ ಒಂದು ವರದಿಯಿಂದ ಆದ ಬಗ್ಗೆ ಸ್ಥಳೀಯರು ಸಂತಸ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page