6

ಶವವಾಗಿ ಸಿಕ್ಕ ಹನೀಫ್: ನಾಲ್ಕನೇ ದಿನದ ಹುಡುಕಾಟದಲ್ಲಿ ಶವ ಪತ್ತೆ

ಯಲ್ಲಾಪುರ ತಾಲೂಕಿನ ಕವಲಗಿಹಳ್ಳದಲ್ಲಿ ನಾಲ್ಕನೇ ದಿನದ ಕಾರ್ಯಾಚರಣೆ ವೇಳೆ ಮಹಮ್ಮದ್ ಹನೀಫ್ ಶವವಾಗಿ ಪತ್ತೆಯಾಗಿದ್ದಾನೆ. ಮುಳುಗಿದ ಸ್ಥಳದಿಂದ ಒಂದೂವರೆ ಕಿಮೀ ದೂರದಲ್ಲಿ ಶವ ಪತ್ತೆಯಾಗಿದೆ.

ಮಾದನಸರದ ಎಂಟು ಜನ ಕವಲಗಿ ಹಳ್ಳ ದಾಟಿ ಬೇಡ್ತಿ ನದಿಗೆ ಮೀನು ಹಿಡಿಯಲು ಕಳೆದ ಭಾನುವಾರ ಹೋಗಿದ್ದರು. ಮೀನು ಹಿಡಿದು ಬರುತ್ತಿರುವಾಗ ಕವಲಗಿ ಹಳ್ಳದಲ್ಲಿ ಒಮ್ಮೆಲೆ ನೀರು ಹೆಚ್ಚಾಗಿ ಮಹಮ್ಮದ ರಫೀಕ್ ಇಬ್ರಾಹಿಂ ಸಾಬ್ ಸೈಯದ್ ಹಾಗೂ ಆತನ ಸಹೋದರ ಮಹಮ್ಮದ್ ಹನೀಫ್ ಇಬ್ರಾಹಿಂ ಸಾಬ್ ಸೈಯ್ಯದ್ ಹಳ್ಳದಲ್ಲಿ ಮುಳಗಿ ಕಾಣೆಯಾಗಿದ್ದರು.

ಕಾಣೆಯಾದ ಇಬ್ಬರ ಪೈಕಿ ಮಹಮ್ಮದ್ ರಫಿಕ್ ಇಬ್ರಾಹಿಂ ಸಾಬ್ ಸೈಯ್ಯದ್ ಸೋಮವಾರ ಶವವಾಗಿ ದೊರೆತಿದ್ದ. ಹನೀಫ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿತ್ತು. ನಾಲ್ಕನೇ ದಿನದ ಕಾರ್ಯಾಚರಣೆಯಲ್ಲಿ ಮುಳುಗಿದ ಸ್ಥಳದಿಂದ ಒಂದು ಕಿ.ಮೀ ದೂರದಲ್ಲಿ ಶವ ದೊರೆತಿದೆ.

ಆಗಾಗ ಸುರಿಯುವ ಮಳೆ, ರಾಡಿ‌ ಮಣ್ಣಿನಿಂದ ಅಡಚಣಿ ಉಂಟಾದರೂ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ, ಶವ ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page