6

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ಯಲ್ಲಾಪುರದ ನಾಯಕನಕೆರೆ ಹಾಗೂ ಹುಣಶೆಟ್ಟಿಕೊಪ್ಪದ ಬೆಳಕೊಪ್ಪದಲ್ಲಿ ಯಾವುದೇ ಅನುಮತಿ ಇಲ್ಲದೇ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಎರಡು ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 330 ರೂ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

ನಾಯಕನಕೆರೆಯ ತನ್ನ ಫಾಸ್ಟ್ ಫುಡ್ ಅಂಗಡಿಯಲ್ಲಿ ಜನರಿಗೆ ಸಾರಾಯಿ ಕುಡಿಯಲು ಅವಕಾಶ ನೀಡಿದ್ದು, ಪೊಲೀಸರು ದಾಳಿ ನಡೆಸಿ, 230 ರೂ ಮೌಲ್ಯದ ಎರಡು ವಿಸ್ಕಿ ಪೌಚ್ ಗಳನ್ನು ವಶಪಡಿಸಿಕೊಂಡರು.

ಹುಣಶೆಟ್ಟಿಕೊಪ್ಪದ ಬೆಳಕೊಪ್ಪ ಗ್ರಾಮದಲ್ಲಿ ಕಿರಣ ಮರಾಠಿ ಎಂಬವರು ತಮ್ಮ ತಾತ್ಕಾಲಿಕ ಶೆಡ್ ನಲ್ಲಿ ಸಾರ್ವಜನಿಕರಿಗೆ ಕುಡಿಯಲು ಅವಕಾಶ ಕೊಟ್ಟಿದ್ದರು. ದಾಳಿ ನಡೆಸಿದ ಪೊಲೀಸರು 100 ರೂ ಮೌಲ್ಯದ ಎರಡು ವಿಸ್ಕಿ ಪೌಚ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎರಡೂ ಕಡೆಗಳಲ್ಲಿ ಒಂದಷ್ಟು ಖಾಲಿ ಗ್ಲಾಸ್ ಗಳು, ಖಾಲಿ ಪೌಚ್ ಗಳೂ ಸಿಕ್ಕಿವೆ.‌ ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page