6

ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ

ಅಂಕೋಲಾ ತಾಲೂಕಿನ ಕೋನಾಳದ ಪೃಥ್ವಿ ರಾಮಚಂದ್ರ ಭಟ್ಟ ಸಂಗೀತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಿ ಎಂ ಶ್ರೀ ಸ್ಕೂಲ್ ಜವಾಹರ ನವೋದಯ ವಿದ್ಯಾಲಯ ಪಂಚವಟಿಯಲ್ಲಿ ನಡೆದ ಕಲೋತ್ಸವದಲ್ಲಿ ಭಾಗವಹಿಸಿದ ಪೃಥ್ವಿ, ರಾಜ್ಯದ 20 ಜಿಲ್ಲೆಗಳಿಂದ ಭಾಗವಹಿಸಿದ ಸ್ಪರ್ಧಿಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಆಂಧ್ರಪ್ರದೇಶದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಹೈದ್ರಾಬಾದ್ ಸ್ಪರ್ಧಿಗಳ ಜೊತೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿ, ಈಗ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪೃಥ್ವಿ ಮಳಗಿಯ ನವೋದಯ ವಿದ್ಯಾಲಯದಲ್ಲಿ 10 ನೇ ತರಗತಿ ಓದುತ್ತಿದ್ದು, ಸಾಂಸ್ಕೃತಿಕ, ಶೈಕ್ಷಣಿಕ ವಿಷಯಗಳಲ್ಲಿ ಪ್ರಾಥಮಿಕ ಹಂತದಿಂದಲೂ ಮುಂಚೂಣಿಯಲ್ಲಿದ್ದಾರೆ.
ಈಕೆ ಕೋನಾಳದ ಪ್ರಗತಿಪರ ಕೃಷಿಕ ರಾಮಚಂದ್ರ ಭಟ್ಟ ಹಾಗೂ ಶಾರದಾ ಭಟ್ಟ ದಂಪತಿಯ ಪುತ್ರಿ.‌ ಇವರ ಸಾಧನೆಗೆ ಕುಟುಂಬದವರು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page