6

ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಎನ್.ಎಸ್.ಎಸ್, ಮಹಿಳಾ ಸಬಲೀಕರಣ ವೇದಿಕೆ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಗ್ರೀನ್ ಕೇರ್ ಸಂಸ್ಥೆ, ಶಿರಸಿ ಇವುಗಳ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಮತ್ತು ವಿಶ್ವ ಸ್ಕಿಜೋ ಪ್ರೇನಿಯಾ ದಿನಾಚರಣೆಯ ಅಂಗವಾಗಿ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ್, ದೃಷ್ಟಾಂತದ ಮೂಲಕ ಸ್ಕಿಜೋಫ್ರೇನಿಯಾ ರೋಗದ ಲಕ್ಷಣಗಳನ್ನು ಮತ್ತು ಚಿಕಿತ್ಸಾ ಕ್ರಮಗಳನ್ನು ವಿವರಿಸಿದರು.
ಗ್ರೀನ್ ಕೇರ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಮಾರ್ ಆರ್. ಎಂ ಮಾತನಾಡಿ ಜನಸಂಖ್ಯಾ ಸ್ಪೋಟದ ದುಷ್ಪರಿಣಾಮ ಮತ್ತು ಜನಸಂಖ್ಯಾ ನಿಯಂತ್ರಣದ ಮಾರ್ಗಸೂಚಿಗಳನ್ನು ತಿಳಿಸಿದರು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್ ತಾಳಿಕೋಟೆ ಸ್ಕಿಜೋಫ್ರೇನಿಯಾ ಕಾಯಿಲೆಯ ಲಕ್ಷಣಗಳನ್ನು ಸೂಚ್ಯವಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಆರ್ ಡಿ ಜನಾರ್ಧನ್ ಮಾತನಾಡಿ, ಜನಸಂಖ್ಯಾ ನಿಯಂತ್ರಣ ಮತ್ತು
ಸ್ಕೇಜೋಫ್ರೇನಿಯಾ ಕಾಯಿಲೆಗಳ ಕುರಿತು ವಿದ್ಯಾರ್ಥಿಗಳು ತಿಳಿದುಕೊಂಡರಷ್ಟೇ ಸಾಲದು. ಅವುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಗ್ರೀನ್ ಕೇರ್ ಜನಪದ ಕಲಾ ತಂಡದವರು ಜನಸಂಖ್ಯಾ ನಿಯಂತ್ರಣ,ಕುಟುಂಬ ಯೋಜನೆ ಹಾಗೂ ಸ್ಕೇಜೋಫ್ರೇನಿಯಾ ಕಾಯಿಲೆ ಪತ್ತೆ, ಚಿಕಿತ್ಸಾಕ್ರಮಗಳನ್ನು ಬಿಂಬಿಸಿ ಅರ್ಥಪೂರ್ಣವಾಗಿ ಅಭಿನಯಿಸಿದರು.

ಗ್ರೀನ್ ಕೇರ್ ಸಂಸ್ಥೆಯ ನಿರ್ದೇಶಕಿ ಆಶಾ ಡಿಸೋಜಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿರೂಪಾಕ್ಷ ಶಿರೂರು,ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ವೇದಿಕೆ ಸಂಚಾಲಕಿ ಶಾಂತೇರಿ ದಾಮೋದರ ಪೈ, ಎನ್ .ಎಸ್.ಎಸ್ ಘಟಕದ ಸಂಚಾಲಕ ರವಿ ಭಟ್ಟ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಲಕ್ಷ್ಮಿ ಪಾ೦ಡರಮೀಸೆ ಪ್ರಾರ್ಥಿಸಿದರು. ವೈಶಾಲಿ ದೇವಳಿ ಸ್ವಾಗತಿಸಿದರು. ಆಶಾ ನಾಯ್ಕ ನಿರ್ವಹಿಸಿದರು. ದಿವ್ಯಾ ಗೌಡ ವಂದಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page