6

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಸೆ.9 ರಂದು

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಬೆಂಗಳೂರಿನ ವಿಧಾನಸೌಧದ 313 ನೇ ಕೊಠಡಿಯಲ್ಲಿ ಸೆ.9 ರಂದು ಮಧ್ಯಾಹ್ನ 12 ಘಂಟೆಗೆ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಧ್ಯಕ್ಷ ಬೀರಣ್ಣ ನಾಯಕ ಮೊಗಟಾ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಸಭೆಯಲ್ಲಿ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಜಿಲ್ಲಾ ಸಮಿತಿಯ ಎಲ್ಲ ಸದಸ್ಯರು ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯ ಹನ್ನೆರಡು ತಾಲೂಕುಗಳಲ್ಲಿಯ ಪ್ರವಾಸೋದ್ಯಮ ಅವಕಾಶ, ಸಾಧಕ, ಭಾದಕಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ತಯಾರಿಸಿದ್ದಾರೆ.

 

ಅಂದು ನಡೆಯುವ ಸಭೆಯಲ್ಲಿ ಸಚಿವ ಎಚ್ ಕೆ ಪಾಟೀಲ ಅವರ ಮಾರ್ಗದರ್ಶನದಲ್ಲಿ ಅಂತಿಮ ವರದಿಗೆ ಒಪ್ಪಿಗೆ ಸಿಗಲಿದ್ದು, ನಂತರ ಆ ವರದಿಯನ್ನು ಜಿಲ್ಲಾ ಸಮಿತಿ ಸರಕಾರಕ್ಕೆ ಒಪ್ಪಿಸಲಿದೆ.

ಅತ್ಯಂತ ಮಹತ್ವದ ಈ ಸಭೆಗೆ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿರಬೇಕೆಂದು ಸಮಿತಿಯ ಅಧ್ಯಕ್ಷ ಬೀರಣ್ಣ ನಾಯಕ ಮೊಗಟಾ ವಿನಂತಿಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page