6

ಮುರಿದ ಬಿದ್ದ ಆಲದ ಮರ: ಗರ್ಭಿಣಿ ಸಾವು, ನಾಲ್ವರಿಗೆ ಗಾಯ

ಬ್ರಹತ್ ಆಲದ ಮರ ಮುರಿವೊಂದು ಮುರಿದು ಬಿದ್ದು, ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟು, ನಾಲ್ಕು ಜನರು ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಪಂ ವ್ಯಾಪ್ತಿಯ ಡೋಮಗೆರೆ ಬಳಿ ನಡೆದಿದೆ.

ಸಾವಿತ್ರಿ ಬಾಬು ಖರಾತ್ (28) ಐದು ತಿಂಗಳ ಗರ್ಭಿಣಿ ಸ್ಥಳದಲ್ಲಿಯೇ ಮೃತಪಟ್ಟ ಮಹಿಳೆ. ಸ್ವಾತಿ ಬಾಬು ಖರಾತ್, ಹಾಗೂ ಅಂಗನವಾಡಿ ಮಕ್ಕಳಾದ ಘಾಟು ಲಕ್ಕು ಕೋಕರೆ, ಶ್ರಾವಣಿ ಬಾಬು ಖರಾತ್, ಶಾಂಭವಿ ಬಾಬು ಖರಾತ್ ಗಾಯಗೊಂಡವರು.

ಇವರೆಲ್ಲ ಅಂಗನವಾಡಿಯಿಂದ ಮನೆಗೆ ತೆರಳುತ್ತಿರುವ ವೇಳೆ ಏಕಾಏಕಿ ಆಲದ ಮರವೊಂದು ಮುರಿದು ಬಿದ್ದಿದೆ. ಇದರಡಿ ಸಿಲುಕಿ ಗರ್ಭಿಣಿ ಮಹಿಳೆ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಜತೆಯಲ್ಲಿದ್ದ ಇನ್ನೂ ಮೂವರು ಅಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳಿಗೆ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಸಾಗಿಸಲಾಗಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page