6

ತಾಲೂಕಾ ಮಟ್ಟದ ಕ್ರೀಡಾಕೂಟ: ಭರತನಹಳ್ಳಿ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಯಲ್ಲಾಪುರ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಗತಿ ವಿದ್ಯಾಲಯ ಭರತನಹಳ್ಳಿಯ ಮಕ್ಕಳು ಉತ್ತಮ ಪ್ರದರ್ಶನ ನೀಡಿದ್ದಾರೆ.

ಬಾಬು ತೋರವತ್ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ಪ್ರಥಮ, ತ್ರಿಬಲ್ ಜಂಪ್ ನಲ್ಲಿ ಪ್ರಥಮ ಸ್ಥಾನ ಪಡೆದು “ತಾಲೂಕು ಮಟ್ಟದ
ವೈಯಕ್ತಿಕ ವೀರಾಗ್ರಣಿ” ಪ್ರಶಸ್ತಿ ಪಡೆದಿದ್ದಾರೆ.

ವೈಯಕ್ತಿಕ ವಿಭಾಗದಲ್ಲಿ ಸಮರ್ಥ ಪೂಜಾರಿ ಉದ್ದ ಜಿಗಿತದಲ್ಲಿ ದ್ವಿತೀಯ, ಲೋಹಿತ ಪೂಜಾರಿ 800m ಓಟದಲ್ಲಿ ತೃತೀಯ, ನಂದನ ಪಟಗಾರ 200 ಮೀಟರ್ ಓಟದಲ್ಲಿ ತೃತೀಯ, ಕೀರ್ತನ ಪಟಗಾರ 400m ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಗುಂಪು ವಿಭಾಗದಲ್ಲಿ ಬಾಲಕರ 4x400m ರಿಲೇಯಲ್ಲಿ ಪ್ರಥಮ, ಬಾಲಕರ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ, ಬಾಲಕಿಯರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ 4x100m ರಿಲೇಯಲ್ಲಿ ದ್ವಿತೀಯ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಭಾಗವಹಿಸಿದ ಹಾಗೂ ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page