6

ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಾರ್ಟಿ ಅಂಕೋಲಾ ಮಂಡಲ, ಯುವ ಮೋರ್ಚಾ ಹಾಗೂ ವಿವಿಧ ಶಕ್ತಿಕೇಂದ್ರಗಳ ಸಹಯೋಗದಲ್ಲಿ ಪಕ್ಷದ ಸೇವಾ ಪಾಕ್ಷಿಕದ ಭಾಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಕಲ್ಲೇಶ್ವರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವಾರದಲ್ಲಿ ಆಯೋಜಿಸಲಾಗಿದೆ.

ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ ಇವರ ಸಹಕಾರದೊಂದಿಗೆ ನಡೆಯಲಿರುವ ಈ ಶಿಬಿರದಲ್ಲಿ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಪುರುಷ ,ಮಹಿಳೆಯರು ರಕ್ತದಾನ ಮಾಡಬಹುದಾಗಿದೆ.

ಬೆಳಗ್ಗೆ 9.30 ರಿಂದ ಪ್ರಾರಂಭವಾಗಿ ಮಧ್ಯಾಹ್ನ 3 ಗಂಟೆಯವರೆಗೆ ಶಿಬಿರ ನಡೆಯಲಿದೆ. ಜೀವ ಉಳಿಸುವ ಪುಣ್ಯ ಕಾರ್ಯಗಳಲ್ಲೊಂದಾದ ರಕ್ತದಾನವನ್ನು ಹೆಚ್ಚಿನ ಸಂಖ್ಯೆಯ ಜನರು ಮಾಡುವ ಮೂಲಕ, ಶಿಬಿರವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ವಿನಂತಿಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page