6

ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದಿಂದ ಸೆ.19 ರಂದು ಮಧ್ಯಾಹ್ನ 3 ಘಂಟೆಗೆ ಏಕತಾ ಸಮಾವೇಶ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಜಿಲ್ಲೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಹೇಳಿದರು.

ಅವರು ಯಲ್ಲಾಪುರದ ಬಸವೇಶ್ವರ ದೇವಸ್ಥಾನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಸಮಾಜದ ಪಂಚ ಪೀಠಾಧಿಪತಿಗಳು, ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಪೂರ್ವದಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಠದಿಂದ ನೆಹರು ಮೈದಾನದವರೆಗೆ ಪಾದಯಾತ್ರೆ ನಡೆಯಲಿದೆ. ಸರ್ಕಾರದಿಂದ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜ ಬಾಂಧವರು ದಾಖಲಿಸಬೇಕಾದ ಅಂಶಗಳ ಕುರಿತು ಮಠಾಧೀಶರು ಮಾರ್ಗದರ್ಶನ ನೀಡಲಿದ್ದಾರೆ ಎಂದರು.‌

ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗದಿಂದ
ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಯಲ್ಲಾಪುರದಿಂದ ಐದು ನೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಐದು ಸಾವಿರ ಜನ ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಸದಸ್ಯರು, ಪದಾಧಿಕಾರಿಗಳು, ಸಮುದಾಯ ಬಾಂಧವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದುಕೊಂಡು ಬಂದು ಸಮಾವೇಶದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಮಹಾಸಭಾದ ಕೈಗಾರಿಕಾ ವಾಣಿಜ್ಯ ವಿಭಾಗದ ನಿರ್ದೇಶಕ
ಮಹೇಶ ಗೌಳಿ, ಜಿಲ್ಲಾ ಘಟಕದ ಸದಸ್ಯರಾದ ಚನ್ನವೀರಯ್ಯ ಪಾಟೀಲ್ , ಶಿವಯ್ಯ ಹಿರೇಮಠ, ಬಸವರಾಜ ಗೌಳಿ, ಪ್ರಭಾವತಿ ಗೋವಿ, ಉದಯ ಜಾಲಿಹಾಳ ಇದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page