6

ಯೋಧರ ವಸತಿಗೆ ಸರ್ಕಾರಿ ಭೂಮಿ: ಅಂಗವಿಕಲರಿಗೂ ಆದ್ಯತೆ

ಕಾರವಾರ: `ಜಿಲ್ಲೆಯಲ್ಲಿನ ಮಾಜಿ ಯೋಧರು, ಅಶಕ್ತರು ಮತ್ತು ವಸತಿಹೀನರಿಗೆ ಜೀವನ ನಿರ್ವಹಣೆಗೆ ಭೂಮಿ ಒದಗಿಸುವ ಕುರಿತಂತೆ ಜಿಲ್ಲೆಯ ಎಲ್ಲಾ ತಾಲುಕಿನ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಖಾಲಿ ಭೂಮಿ ಕುರಿತು ಮಾಹಿತಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.
ಶುಕ್ರವಾರ ತಹಶೀಲ್ದಾರರ ಸಭೆ ನಡೆಸಿದ ಅವರು `ಪ್ರತಿ ವರ್ಷ ಜುಲೈ 1ಕ್ಕೆ ಜಿಲ್ಲೆಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಕುರಿತಂತೆ ಘೋಷಣೆ ಮಾಡಬೇಕು. ಇದರಿಂದ ಆ ಭೂಮಿಯನ್ನು ದೇಶ ಸೇವೆಗಾಗಿ ಜೀವನ ಮುಡಿಪಾಗಿಟ್ಟು ನಿವೃತ್ತರಾದ ಮತ್ತು ವಿವಿಧ ಕಾರ್ಯಚರಣೆಗಳಲ್ಲಿ ಭಾಗವಹಿಸಿ ವಿಕಲಚೇತನರಾದ ಮಾಜಿ ಸೈನಿಕರಿಗೆ ನೀಡಲು ಸಾಧ್ಯ. ಜೊತೆಗೆ ಜಿಲ್ಲೆಯಲ್ಲಿನ ಅಶಕ್ತರು ಮತ್ತು ವಸತಿಹೀನರಿಗೆ ನೆರವು ನೀಡಬಹುದು’ ಎಂದರು. `ಖಾಲಿ ಇರುವ ಸರಕಾರಿ ಭೂಮಿಯನ್ನು ಸರಕಾರಿ ಉದ್ದೇಶಗಳಿಗೆ ಅಗತ್ಯವಿದ್ದರೆ ಆ ಯೋಜನೆಗೆ ಅಗತ್ಯವಿರುವ ಪ್ರಮಾಣದ ಭೂಮಿಯನ್ನು ಕಾಯ್ದಿರಿಸಿ, ಉಳಿದ ಭೂಮಿಯನ್ನು ಘೋಷಣೆ ಮಾಡಿ’ ಎಂದು ಸೂಚಿಸಿದರು. ಯಾವುದೇ ಕಾರಣಕ್ಕೂ ಲಭ್ಯ ಜಮೀನಿನ ಮಾಹಿತಿಯನ್ನು ಮರೆಮಾಚದಂತೆ ಸೂಚಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page