6

ಅಲ್ಕೇರಿ ಕ್ರಾಸ್ ಅಪಘಾತ: ಆಸ್ಪತ್ರೆಯಲ್ಲಿ ಗಾಯಾಳು ಸಾವು

ಯಲ್ಲಾಪುರ ತಾಲೂಕಿನ ಕಿರವತ್ತಿಯ ಅಲ್ಕೇರಿ ಕ್ರಾಸ್ ಬಳಿ‌ ಭಾನುವಾರ ಬೆಳಗ್ಗೆ ಕಂಟೇನರ್ ಲಾರಿ ಹಾಗೂ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೂ ಸಾವನ್ನಪ್ಪಿದ್ದಾರೆ.

‌‌‌ ಬೈಲಂದೂರಿನ ಪ್ರಭಾಕರ ಸೋಮಾಪುರಕರ್ (40) ಮೃತ ವ್ಯಕ್ತಿ. ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬೆಳಗ್ಗೆ ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಛಾಯಪ್ಪ ಸೋಮಾಪುರಕರ್ (45) ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡಿದ್ದ ಪ್ರಭಾಕರ ಬದುಕಬಹುದೆಂಬ ನಿರೀಕ್ಷೆ ಸುಳ್ಳಾಗಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page