6

ಟಿಎಂಎಸ್ ಚುಕ್ಕಾಣಿ ಯಾರಿಗೆ? ಪೆಟ್ಟಿಗೆಯಲ್ಲಿ ಭದ್ರವಾಯ್ತು ಭವಿಷ್ಯ

ಯಲ್ಲಾಪುರದ ಟಿಎಂಎಸ್ ಆಡಳಿತ ಮಂಡಳಿಯ ಆಯ್ಕೆಗೆ ಭಾನುವಾರ ಮತದಾನ ಪ್ರಕ್ರಿಯೆ ನಡೆಯಿತು.
ಜೋರಾದ ಮಳೆಯ ನಡುವೆಯೂ ತಾಲೂಕಿನ ವಿವಿಧೆಡೆಯಿಂದ ಸಂಘದ ಸಾವಿರಾರು ಸದಸ್ಯರು ಬಂದು ಉತ್ಸಾಹದಿಂದಲೇ ಮತ ಚಲಾಯಿಸಿದರು. ‌

ಒಟ್ಟು 14 ಸ್ಥಾನಗಳಲ್ಲಿ ಹಿಂದುಳಿದ ಬ ವರ್ಗ ಹಾಗೂ ಪರಿಶಿಷ್ಟ ಜಾತಿಯ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಉಳಿದ 12 ಸ್ಥಾನಗಳ ಆಯ್ಕೆಗೆ ಸದಸ್ಯರು ಮತ ಚಲಾಯಿಸಿದರು.‌

ಹಾಲಿ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಹಾಗೂ ಇಡಗುಂದಿ ಸೊಸೈಟಿ ಅಧ್ಯಕ್ಷ ನಾರಾಯಣ ಭಟ್ಟ ಬಟ್ಲಗುಂಡಿ ತಂಡಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಚುನಾವಣಾ ವಿಷಯವಾಗಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ತೀರ್ಪು ಬಂದ ನಂತರ ಮತ ಎಣಿಕೆ ನಡೆಯಲಿದೆ.

ಪದೇ ಪದೇ ನ್ಯಾಯಾಲಯದ ಮೊರೆ ಹೋಗುತ್ತಿರುವುದು, ಚುನಾವಣಾ ಪ್ರಚಾರದ ಅಬ್ಬರದಿಂದಾಗಿ ಚುನಾವಣೆ ವಿಶೇಷತೆ ಪಡೆದಿದೆ. ಆದರೆ ನ್ಯಾಯಾಲಯದ ತೀರ್ಪು ಪ್ರಕಟವಾಗುವವರೆಗೂ ಸದಸ್ಯರು ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯಬೇಕಾದದ್ದು ಅನಿವಾರ್ಯ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page