6

ಅಸಹಾಯಕ ಅನಾಥನಿಗೆ ಆಸರೆಯಾದ ಅಕ್ಷರಕ್ರಾಂತಿ

ಸಿದ್ದಾಪುರ: ಅಂಕೋಲಾ ತಾಲೂಕಿನ ಅಂಗಡಿಬೈಲ್ ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿದ್ದಿದ್ದ ಕೃಷ್ಣ ಹೆಗಡೆ ಎಂಬಾತರ ಮುಖ ಹಾಗೂ ಕುತ್ತಿಗೆ ಕೊಳೆತು ಹುಳಗಳಾಗಿದ್ದು, ಈ ವಿಷಯ ತಿಳಿದ ಸಿದ್ದಾಪುರದ ಅಕ್ಷರಕ್ರಾಂತಿ ನಾಗರಾಜ ನಾಯ್ಕ ಅವರನ್ನು ತಮ್ಮ ಆಶ್ರಮಕ್ಕೆ ಕರೆದೊಯ್ದಿದ್ದಾರೆ.
ಕಳೆದ ಕೆಲ ದಿನಗಳಿಂದ ಕೃಷ್ಣ ಹೆಗಡೆ ಬಸ್ ನಿಲ್ದಾಣದಲ್ಲಿ ವಾಸವಾಗಿದ್ದರು. ಜಿ ಪಂ ಮಾಜಿ ಸದಸ್ಯ ಜಿ ಎಂ ಶೆಟ್ಟಿ ಅವರನ್ನು ನೋಡಿ ಶಿರಸಿಯ ಸ್ಕೋಡ್‌ವೆಸ್ ಮುಖ್ಯಸ್ಥ ವೆಂಕಟೇಶ್ ನಾಯ್ಕ ಅವರಿಗೆ ಮಾಹಿತಿ ನೀಡಿದ್ದರು. ವೆಂಕಟೇಶ್ ನಾಯ್ಕ ಅವರು ನಾಗರಾಜ ಅವರನ್ನು ಸಂಪರ್ಕಿಸಿ ಅವರ ಬಗ್ಗೆ ತಿಳಿಸಿದ್ದು, ತಕ್ಷಣ ಧಾವಿಸಿದ ನಾಗರಾಜ ನಾಯ್ಕರು ಅಸಹಾಯಕ ಸ್ಥಿತಿಯಲ್ಲಿದ್ದ ಹೆಗಡೆ ಅವರನ್ನು ತಮ್ಮ ಆಶ್ರಮಕ್ಕೆ ಕರೆತಂದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕೆಲವರು ಆರ್ಥಿಕ ನೆರವು ನೀಡಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಕೃಷ್ಣ ಹೆಗಡೆಯವರಿಗೆ ಚಿಕಿತ್ಸೆ ನಡೆಯುತ್ತಿದೆ.
ಮುಖ ಹಾಗೂ ಕುತ್ತಿಗೆ ಕೊಳೆತು ಹುಳ ಆಗಿರುವುದರಿಂದ ಅವರಿಗೆ ಊಟ ಮಾಡಲು ಆಗುತ್ತಿಲ್ಲ. ಹೀಗಾಗಿ ಮೂಗಿನಲ್ಲಿ ಪೈಪ್ ಇಳಿಸಿ ಆಹಾರ ನೀಡಲಾಗುತ್ತಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page