6

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ಕಾರೊಂದು ರಸ್ತೆ ಪಕ್ಕದ ಕಟ್ಟೆಗೆ ಡಿಕ್ಕಿ ಹೊಡೆದು, ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಲ್ಲಾಪುರ ತಾಲೂಕಿನ ಶೇಡಿಕೆರೆ ಕ್ರಾಸ್ ಬಳಿ ನಡೆದಿದೆ.

ಯಲ್ಲಾಪುರದಿಂದ ಕುಮಟಾ ಕಡೆಗೆ ಹೊರಡಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಶೇಡಿಕೆರೆ ಕ್ರಾಸ್ ರಸ್ತೆಯ ಪಕ್ಕದ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಶಾರ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ.

ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದವರು ಬಂದು ಬೆಂಕಿ ಆರಿಸಿದ್ದು, ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಹೋಗಿತ್ತು. ಕಾರಿನಲ್ಲಿದ್ದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಪೊಲೀಸರು ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು. ಕೆಲವೇ ದಿವಸಗಳ ಹಿಂದಷ್ಟೇ ಆರತಿಬೈಲ್ ಘಟ್ಟದಲ್ಲಿ ಕಾರದು ಬೆಂಕಿಗಾಹುತಿಯಾಗಿತ್ತು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page