6

‘ಕೃಷ್ಣಾರ್ಪಣಂ’ ಕಾರ್ಯಕ್ರಮ: ಎಲ್ಲರ ಮನಗೆದ್ದ ದಿಯಾ ಹೆಗಡೆ

ಕಲೆ,ಸಂಸ್ಕೃತಿ ಹಾಗೂ ಭಾರತೀಯ ಪರಂಪರೆಯ ಮೌಲ್ಯಗಳನ್ನು ಶ್ರೀಕೃಷ್ಣಾರ್ಪಣಂ ಸಮಾರಂಭದ ಮೂಲಕ ಸುಜ್ಞಾನ ಸೇವಾ ಸಂಸ್ಥೆಯು ಸಮಾಜಕ್ಕೆ ತಲುಪಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಸುಜ್ಞಾನ ಸೇವಾ ಸಂಸ್ಥೆ, ಇ-ಯಲ್ಲಾಪುರ ಡಿಜಿಟಲ್ ನ್ಯೂಸ್, ಸುಜ್ಞಾನ ವಾಹಿನಿ ಪತ್ರಿಕೆಯ ವತಿಯಿಂದ ಗೌತಮ ಜುವೆಲ್ಲರ್ಸ್ ಯಲ್ಲಾಪುರ, ಹಾಂಗ್ಯೋ ಐಸ್ ಕ್ರೀಂ ಸಹಯೋಗದಲ್ಲಿ ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಕಾರದೊಂದಿಗೆ ಶನಿವಾರ ಯಲ್ಲಾಪುರ ಪಟ್ಟಣದ ಅಡಿಕೆ ಭವನದಲ್ಲಿ ನಡೆದ ಶ್ರೀಕೃಷ್ಣಾರ್ಪಣಂ ಸಮಾರಂಭದಲ್ಲಿ ಪಾಲ್ಗೊಂಡು, ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದರು.

ಸಮಾರಂಭಕ್ಕೆ ಚಾಲನೆ ನೀಡಿದ ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ಹಲವಾರು ಸಮಾಜಮುಖಿ ಮತ್ತು ರಚನಾತ್ಮಕ ಕಾರ್ಯ ಚಟುವಟಿಕೆಗಳನ್ನು ಮಾಡುತ್ತಿರುವ ಸುಜ್ಞಾನ ಸೇವಾ ಸಂಸ್ಥೆಯು ಶ್ರೀಕೃಷ್ಣಾರ್ಪಣಂ ಸಮಾರಂಭದ ಮೂಲಕ ಸಮಾಜವನ್ನು ಜೋಡಿಸುವ ಕಾರ್ಯವನ್ನು ಮಾದರಿಯಾಗಿ ಮಾಡುತ್ತಿದೆ. ಇಂತಹ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಬೇಕು, ಸಾಂಸ್ಕೃತಿಕ ಪಯಣ ಹೀಗೇ ಮುಂದುವರಿಯಲಿ ಎಂದರು.

ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀಕೃಷ್ಣನ ಸಂದೇಶಗಳು ಎಲ್ಲೆಡೆ ತಲುಪಬೇಕು, ಕೃಷ್ಣಪ್ರಜ್ಞೆಯು ಎಲ್ಲೆಡೆ ಜಾಗೃತವಾಗಬೇಕು, ಸಮಷ್ಟಿಯ ಸಮಾಜ ನಿರ್ಮಾಣವಾಗಬೇಕು ಎಂಬ ಸದುದ್ದೇಶದಿಂದ ಈ ಸಮಾರಂಭವನ್ನು ಎಲ್ಲರ ಸಹಕಾರದೊಂದಿಗೆ ಆಯೋಜಿಸಲಾಗಿದೆ ಎಂದರು.

ಖ್ಯಾತ ಗಾಯಕಿ, ಜೀ ಸರಿಗಮಪ, ಸೋನಿ ಸೂಪರ್ ಸ್ಟಾರ್ ಸಿಂಗರ್ ದಿಯಾ ಹೆಗಡೆಯವರಿಗೆ ಸುಜ್ಞಾನ ಸೇವಾ ಸಂಸ್ಥೆಯ ಪ್ರಸಕ್ತ ಸಾಲಿನ ಪ್ರತಿಷ್ಠಿತ ಸುಜ್ಞಾನ ಸಮ್ಮಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ದಿಯಾ ಹೆಗಡೆ ಮಾತನಾಡಿ, ಇಂತಹ ಶ್ರೇಷ್ಠ ಪ್ರಶಸ್ತಿ ನನಗೆ ದೊರಕಿರುವುದು ಸಂತಸವಾಗಿದೆ. ಇನ್ನಷ್ಟು ಸಾಧನೆ ಮಾಡಲು ಈ ಪ್ರಶಸ್ತಿಯು ನನಗೆ ಪ್ರೋತ್ಸಾಹ, ಪ್ರೇರಣೆ ನೀಡಿದೆ ಎಂದರು. ಸಮಾರಂಭದಲ್ಲಿ ದಿಯಾ ಹೆಗಡೆ ಪ್ರಸಿದ್ಧ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ.ಜನಾರ್ದನ ಮಾತನಾಡಿ, ಕಲಾ ಕೌಶಲ್ಯಗಳು, ಸಾಂಸ್ಕೃತಿಕ ಪ್ರತಿಭೆಗಳು ದೇಶಕಟ್ಟಲು, ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ಶ್ರಿಕೃಷ್ಣಾರ್ಪಣ ಸಮಾರಂಭವು ಸುಸಂಪನ್ನತೆಯನ್ನು, ಶ್ರೇಷ್ಠ ಮಾಲ್ಯಗಳನ್ನು ಸಾರುತ್ತಿದೆ ಎಂದರು.

ಸಮಾರಂಭದಲ್ಲಿ ಗೌತಮ ಜುವೆಲ್ಲರ್ಸ್ ಮಾಲೀಕ ಪ್ರಕಾಶ ಶೇಟ್, ವಿಕಾಸ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ, ಮಲೆನಾಡು ಸೊಸೈಟಿಯ ಅಧ್ಯಕ್ಷ ಎಂ.ಅರ್.ಹೆಗಡೆ ಕುಂಬ್ರಿಗುಡ್ಡೆ, ಗ್ರಾಮದೇವಿ ದೇವಾಲಯದ ಅಧ್ಯಕ್ಷ ರಾಜೇಂದ್ರ ಪ್ರಸಾದ ಭಟ್, ವಿಶ್ರಾಂತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ, ಶಮಾ ಭಾರತ ಗ್ಯಾಸ್ ಮಾಲಿಕ ಅಬ್ದುಲ್ ಖಾದರ್ ಶೇಖ್, ಉದ್ಯಮಿ ಮಂಜುನಾಥ ಜನ್ನು ಗೋಕರ್ಣ, ಜ್ಞಾನೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷೆ ಪೂಜಾ ಶೇಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ವಿವಿಧ ಕ್ಷೇತ್ರಗಳ ಗಣ್ಯರುಪಾಲ್ಗೊಂಡಿದ್ದರು. ಸಮಾರಂಭದಲ್ಲಿ ವಿನುತಾ ರಾಘವೇಂದ್ರ, ವರುಣಿ ಹೆಗಡೆ ಅವರಿಂದ ಭರತನಾಟ್ಯ, ಭಕ್ತಿಗೀತೆ ನಡೆಯಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.

ಶ್ರೀರಕ್ಷಾ ವರ್ಣೆಕರ್ ಪ್ರಾರ್ಥಿಸಿದರು. ಮಾತೃ ಮಂಡಳಿಯ ಪ್ರಮುಖರಾದ ಪಾರ್ವತಿ ಸಣ್ಣೇಮನೆ, ಸುಮಾ ಹೆಗಡೆ ದೋಣಗಾರ ಭಗವದ್ಗೀತೆಯನ್ನು ಪಠಿಸಿದರು. ತಾಳಮದ್ದಳೆ ಅರ್ಥಧಾರಿ ಚಂದ್ರಕಲಾ ಭಟ್ಟ ನಿರ್ವಹಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page