6

ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

ಯಲ್ಲಾಪುರದ ಸಂಕಲ್ಪ ಸೇವಾ ಸಂಸ್ಥೆಯ ವತಿಯಿಂದ 39 ನೇಯ ವರ್ಷದ ಸಂಕಲ್ಪ ಉತ್ಸವ ಅ 31 ರಿಂದ ನ 4 ವರೆಗೆ ಅದ್ದೂರಿಯಾಗಿ ಪಟ್ಟಣದ ಗಾಂಧಿ ಕುಟೀರದಲ್ಲಿ ನಡೆಯಲಿದೆ ಎಂದು ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.

ಅವರು ಬುಧವಾರ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಪತ್ರಕರ್ತರಿಗೆ ಮಾಹಿತಿ ನೀಡಿದರು. ರಾಜ್ಯದಲ್ಲಿಯೇ ನಿರಂತರವಾಗಿ ಸಾಂಸ್ಕೃತಿಕ ತೇರನ್ನೆಳೆಯುತ್ತಿರುವ ಕೆಲವೇ ಸಂಸ್ಥೆಗಳಲ್ಲಿ ಸಂಕಲ್ಪವೂ ಒಂದಾಗಿ ಹೊರಹೊಮ್ಮಿದೆ. ಕನ್ನಡ ಜೀವನಹಬ್ಬ ಸಂಸ್ಕೃತಿಯ ಸುಗ್ಗಿ ಇದಾಗಿದ್ದು, ನಾಡಿನ ನೂರಾರು ಕಲಾವಿದರನ್ನು ಬೆಳೆಸಿದ ಹೆಗ್ಗಳಿಕೆ ಹೊಂದಿದೆ ಎಂದರು.

ಅಕ್ಟೋಬರ್ 31 ರಂದು ಸಂಜೆ 5.30 ಕ್ಕೆ ಸ್ವರ್ಣವಲ್ಲೀ ಶ್ರೀಗಳು ಹಾಗೂ ಎಡನೀರು ಶ್ರೀಗಳು ಉತ್ಸವವನ್ನು ಉದ್ಘಾಟಿಸಲಿದ್ದಾರೆ. 5 ದಿನದ ಉತ್ಸವದಲ್ಲಿ ಶಿರಳಗಿ ಬ್ರಹ್ಮಾನಂದ ಭಾರತಿ ಶ್ರೀಗಳು, ಬಾರ್ಕೂರು ಶ್ರೀಗಳು, ನೆಲೆಮಾವು ಶ್ರೀಗಳು, ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಭಾಗವಹಿಸಲಿದ್ದಾರೆ.
ಪ್ರತಿ ದಿನ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ, ತಾಳಮದ್ದಲೆ, ಭರತನಾಟ್ಯ, ಕೀರ್ತನೆ, ಸಂಗೀತ, ನಾಟಕ, ಗಮಕ ವಾಚನ, ಭಜನೆ ನಡೆಯಲಿದೆ. ಪುಸ್ತಕ ಬಿಡುಗಡೆ, ರಾಷ್ಟ್ರಭಕ್ತಿ ಕಾರ್ಯಕ್ರಮ, ನಿವೃತ್ತ ಸೈನಿಕರಿಗೆ, ಸಾಧಕರಿಗೆ ಸನ್ಮಾನ, ಪುರಾಣ ಲಹರಿ ಕಾರ್ಯಕ್ರಮ ನಡೆಯಲಿದೆ. ಗೋ ಉತ್ಪನ್ನ ಮಳಿಗೆ, ಆಯುರ್ವೇದ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಸಂಸ್ಥೆಯ ಸಂಚಾಲಕ ಪ್ರಸಾದ ಹೆಗಡೆ ಮಾತನಾಡಿ, ಈ ಬಾರಿ ವಿವಿಧ ಕ್ಷೇತ್ರಗಳ ಸಾಧಕರಾದ ಬಿ.ಎನ್.ವಾಸರೆ, ರಾಮನಾಥ ಭಟ್ಟ, ಯಮುನಾ ನಾಯ್ಕ, ಕಲ್ಲಪ್ಪ ನಾಯ್ಕ, ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆ, ಚಿದಾನಂದ ಹರಿಜನ, ಡಾ.ನಾರಾಯಣ ಹುಳ್ಸೆ ಅವರಿಗೆ ಸಂಕಲ್ಪ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಸಂಸ್ಥೆಯ ಸದಸ್ಯ ಸಿ.ಜಿ.ಹೆಗಡೆ ಮಾತನಾಡಿ, ಪ್ರತಿ ದಿನ ಸುಬ್ರಹ್ಮಣ್ಯ ಚಿಟ್ಟಾಣಿ ಅವರ ನೇತೃತ್ವದಲ್ಲಿ ಪ್ರಸಿದ್ಧ ಕಲಾವಿದರಿಂದ ಬಬ್ರುವಾಹನ, ಗದಾಯುದ್ಧ, ಕಾಳಿದಾಸ, ದ್ರೌಪದಿ ಪ್ರತಾಪ, ಪಾಂಚಜನ್ಯ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು. ಸಂಸ್ಥೆಯ ಸದಸ್ಯ ಬಾಬು ಬಾಂದೇಕರ್ ಇದ್ದರು.

 

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page