6

ಅಂತೂ ಸಿಕ್ಕಿಬಿದ್ದ ಚಿನ್ನದ ಕಳ್ಳ

ಯಲ್ಲಾಪುರ ತಾಲೂಕಿನ ವಿವಿಧೆಡೆ ಬಂಗಾರ, ಹಣ ದೋಚುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸಣಗಿ ಗ್ರಾ.ಪಂ.ನ ಮಡಿವಾಳ ಕೇರಿಯ ಈಶ್ವರ ಮಂಜುನಾಥ ಸಿದ್ದಿ ಬಂಧಿತ ಯುವಕ. ಕೂಲಿ ಕೆಲಸ ಮಾಡುತ್ತಿದ್ದ ಈತ, ಕೆಲಸದ ನೆಪದಲ್ಲಿ ಮನೆಗಳಿಗೆ ಹೋಗುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದೇ, ಬೀಗ ಹಾಕಿರುವ ಸಮಯ ಸಾಧಿಸಿ ಬಾಗಿಲು ಮುರಿದು ಹಣ, ಬಂಗಾರ ದೋಚುತ್ತಿದ್ದ. ಹಗಲಿನಲ್ಲೇ ಕಳ್ಳತನ ಮಾಡುವುದು ಇವನ ವಿಶೇಷವಾಗಿತ್ತು.

ಯಲ್ಲಾಪುರ ಪಟ್ಟಣ, ಮಂಚಿಕೇರಿ, ಕುಂದರಗಿ ಭಾಗದಲ್ಲಿ ಕಳ್ಳತನ ಮಾಡಿ ಕೆಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು, ಅಂಕೋಲಾದ ಬಾಳೆಗುಳಿ ಕ್ರಾಸ್ ಬಳಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನಿಂದ 18.08 ಲಕ್ಷ ರೂ ಮೌಲ್ಯದ ಆಭರಣ ಹಾಗೂ ಒಂದು ಸ್ಕೂಟಿ ವಶಕ್ಕೆ ಪಡೆಯಲಾಗಿದೆ.

ಈತನ ಪತ್ತೆಗಾಗಿ ಯಲ್ಲಾಪುರ ಪಿ.ಐ ರಮೇಶ ಹಾನಾಪುರ ನೇತೃತ್ವದಲ್ಲಿ, ಪಿ.ಎಸ್.ಐ.ಗಳಾದ ರಾಜಶೇಖರ ವಂದಲಿ, ಮಹಾವೀರ ಕಾಂಬ್ಳೆ, ಸಿದ್ದಪ್ಪ ಗುಡಿ, ಎಸ್.ವಿ.ಚವ್ಹಾಣ, ಅಲ್ಲದೇ ಸಿಬ್ಬಂದಿಗಳಾದ ಬಸವರಾಜ ಹಗರಿ, ಮಹಮ್ಮದ್ ಶೇಖ್, ಶೋಭಾ ನಾಯ್ಕ, ಗಿರೀಶ ಲಮಾಣಿ, ಪರಮೆಶ್ವರ ಮಫಿಸಿ, ರೇಖಾ ಎಂ.ಎಸ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಈ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕೆಲವು ದಿನಗಳ‌ ಹಿಂದಷ್ಟೇ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಚಿಕೇರಿ ಭಾಗದ ಮುಖಂಡರು ಯಲ್ಲಾಪುರ ಪೊಲೀಸರ ನಿಷ್ಕ್ರಿಯತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅದಕ್ಕೆ ಕಳ್ಳನ ಬಂಧನದ ಮೂಲಕ ಪೊಲೀಸರು ಉತ್ತರ ನೀಡಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page