6

ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ

ಹಾನಗಲ್ಲ: ತಾಲೂಕಿನ ಗೊಂದಿ ಹಾಗೂ ಮಕರವಳ್ಳಿ ಗ್ರಾಮಗಳ ಸುತ್ತಮುತ್ತ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಬೃಹತ್ ಗಾತ್ರದ ಹೆಬ್ಬಾವು Python ಅನ್ನು ಉರಗ ರಕ್ಷಕ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ತಾಲೂಕಿನ ಗೊಂದಿ ಗ್ರಾಮದ ಸಿದ್ದಲಿಂಗಪ್ಪ ಪೂಜಾರ ಅವರ ಮನೆ ಹಿಂಭಾಗದ ಭತ್ತದ ಹುಲ್ಲಿನ ಬಣವೆಯಲ್ಲಿ 20 ಕೆ.ಜಿ. ತೂಕದ ಹೆಬ್ಬಾವು ಅಡಗಿರುವುದು ಗುರುವಾರ ಕಂಡುಬಂದಿತ್ತು. ಇದರಿಂದ ಮನೆಯವರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದರು.
ಹೆಬ್ಬಾವು ಇರುವ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಗಿರೀಶ ಕರಿದ್ಯಾವಣ್ಣನವರ ಹಾಗೂ ರಾಜು ಅವರು ಕಾರ್ಯಾಚರಣೆ ನಡೆಸಿ ಹೆಬ್ಬಾವು ಅನ್ನು ಯಾವುದೇ ಅಪಾಯವಾಗದಂತೆ ರಕ್ಷಿಸಿದರು. ಬಳಿಕ ಹೆಬ್ಬಾವು ಅನ್ನು ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಬಿಡಲಾಯಿತು.
ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದರಿಂದ ಕೆಲಕಾಲ ಗೊಂದಿ ಹಾಗೂ ಮಕರವಳ್ಳಿ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉರಗಪ್ರೇಮಿಗಳ ಸಮಯೋಚಿತ ಕಾರ್ಯಾಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.
  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page