6

ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ಹಾನಗಲ್: ಹಲವು ದಶಕಗಳಿಂದ ಸ್ವಂತ ಮನೆಯ ಮಾಲಿಕತ್ವದ ದಾಖಲೆಗಳಿಗಾಗಿ ಕಾಯುತ್ತಿದ್ದ ಗುರುರಾಯಪಟ್ಟಣ ಗ್ರಾಮದ 150 ಕುಟುಂಬಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಮನೆ ಮಾಲಿಕತ್ವದ ಶಾಶ್ವತ ಹಕ್ಕನ್ನು ಕಲ್ಪಿಸುವ ನಿಟ್ಟಿನಲ್ಲಿ 150 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ಶ್ರೀನಿವಾಸ ಮಾನೆ ಫಲಾನುಭವಿ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

ಮನೆ ಮಾಲಿಕತ್ವಕ್ಕೆ ಸಂಬಂಧಿಸಿದ ದಾಖಲೆಗಳಿಲ್ಲದೆ ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದ ಕುಟುಂಬಗಳಿಗೆ ಇದೀಗ ಮನೆ ನೋಂದಣಿ, ಇ-ಸ್ವತ್ತು ಹಾಗೂ ಗಣಕೀಕೃತ ಹಕ್ಕುಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಲಾಗಿದೆ. ಇದರ ಮೂಲಕ ಕುಟುಂಬಗಳಿಗೆ ತಮ್ಮ ಮನೆ ಮೇಲಿನ ಶಾಶ್ವತ ಮಾಲಿಕತ್ವದ ಹಕ್ಕು ದೊರೆತಂತಾಗಿದೆ.

 

ಹಕ್ಕುಪತ್ರ ವಿತರಣೆ ಬಳಿಕ ಫಲಾನುಭವಿ ಕುಟುಂಬಗಳಲ್ಲಿ ಸಂತಸ ಮನೆ ಮಾಡಿದೆ. ಹಲವು ವರ್ಷಗಳಿಂದ ಮನೆ ತಮ್ಮದೇ ಎಂಬ ಅಧಿಕೃತ ದಾಖಲೆಗಾಗಿ ಕಾಯುತ್ತಿದ್ದ ಕುಟುಂಬಗಳಿಗೆ ಇದೀಗ ಆ ಹಕ್ಕು ದೊರೆತಿದ್ದು, ಬದುಕಿನಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಭೂಗ್ಯಾರಂಟಿ ಕಾರ್ಯಕ್ರಮದಡಿ ಹಾನಗಲ್ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿ ಕುಟುಂಬಗಳು ಮನೆ ಮಾಲಿಕತ್ವದ ಹಕ್ಕು ಪಡೆಯುತ್ತಿರುವುದು ಗಮನಾರ್ಹವಾಗಿದೆ.

ದಶಕಗಳಿಂದ ದಾಖಲೆಗಾಗಿ ಕಾಯುತ್ತಿದ್ದ 150 ಕುಟುಂಬಗಳ ಕೈಗೆ ಇದೀಗ ಹಕ್ಕುಪತ್ರ ತಲುಪಿದ್ದು, ಮನೆ ಮಾಲಿಕತ್ವದ ಕುರಿತಾದ ಅವರ ದೀರ್ಘಕಾಲದ ಅನಿಶ್ಚಿತತೆಗೆ ತೆರೆ ಬಿದ್ದಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page