6

ದರೋಡೆ ಮಾಡಿದ ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ–ದಂಡ

ಹಾವೇರಿ–ರಾಣೇಬೆನ್ನೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನ ನಿಲ್ಲಿಸಿ, ವಾಹನದಲ್ಲಿದ್ದವರ ಮೇಲೆ ಹಲ್ಲೆ ಮಾಡಿ ಅವರ ಬಳಿಯ ಮೊಬೈಲ್ ಫೋನ್ ಹಾಗೂ ಹಣ ಕಿತ್ತುಕೊಂಡು ದರೋಡೆ ಮಾಡಿದ ಮೂವರು ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ ರೂ.10 ಸಾವಿರ ದಂಡ ವಿಧಿಸಿ ಸೆ.2 ರಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿರಾದಾರ ದೇವೇಂದ್ರಪ್ಪ ಎನ್. ಅವರು ತೀರ್ಪು ನೀಡಿದ್ದಾರೆ.

ದಿ. 08-08-2024 ರಂದು ರಾತ್ರಿ ಸಮಯದಲ್ಲಿ ಹಾವೇರಿ ನಗರದ ತೋಟದ ಯಲ್ಲಾಪುರ ಬ್ರಿಡ್ಜ್ ಸಮೀಪ ಹಾವೇರಿ–ರಾಣೇಬೆನ್ನೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನ ನಿಲ್ಲಿಸಿ, ವಾಹನದಲ್ಲಿದ್ದ ಇಬ್ಬರನ್ನು ಕೆಳಗೆ ಜಗ್ಗಿ ಎಳೆದು, ರಾಡ್‌ನಿಂದ ಹೊಡೆದು, ಎರಡು ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಹೋಗಿ, ಮೊಬೈಲ್‌ನ್ನು ರೂ.2,000/-ಕ್ಕೆ ಮಾರಿದ ಸಾಕ್ಷ್ಯ ಪುರಾವೆಗಳು ಸಾಬೀತಾಗಿತ್ತು.

ಈ ಪ್ರಕರಣದಲ್ಲಿ ಆರೋಪಿತರಾದ ದೇವಿಹೊಸೂರು ಗ್ರಾಮದ ಪ್ರವೀಣ ಬಸವರಾಜ ಕಟ್ಟಿಮನಿ, ಹಾವೇರಿಯ ಸಾಗರ ರಾಮಪ್ಪ ಕಟ್ಟಿಮನಿ ಹಾಗೂ ಸೊರಬ ನಿವಾಸಿ ಕೃಷ್ಣ ಜಯಪ್ಪ ಇವರುಗಳ ಮೇಲೆ ಎಸಗಿದ ಆರೋಪಗಳಾದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 309(4), 311ರ ಅಡಿಯಲ್ಲಿ ಆರೋಪಗಳನ್ನು ಅಭಿಯೋಜನೆಯು ರುಜುವಾತುಪಡಿಸಿದೆ.

ಹಾವೇರಿ ಪೊಲೀಸ್ ಠಾಣೆಯ ಪಿ.ಐ. ಮೋತಿಲಾಲ್ ಪವಾರ ಅವರು ತನಿಖೆ ಕೈಗೊಂಡು, ಆರೋಪಿತರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಅಭಿಯೋಜನೆ ಪರವಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಸಿದ್ಧಾರೂಢ ಎಂ. ಗೆಜ್ಜಿಹಳ್ಳಿ ಅವರು ವಾದ ಮಂಡಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page