6

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವರು ಹೇಳಿದ್ದೇನು?

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವ ರುದ್ರಪ್ಪ ಲಮಾಣಿ ಹೇಳಿದ್ದೇನು!
ಹಾನಗಲ್: ಹಾವೇರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸುವ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ. ಎರಡನೇ ಹಂತದಲ್ಲಿ ಜಿಲ್ಲೆಯ ಕೆಲವು ತಾಲೂಕುಗಳು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಸಕ್ಕರೆ ಮತ್ತು ಜವಳಿ  ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ಹಾನಗಲ್ ತಾಲ್ಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರುದ್ರಪ್ಪ ಲಮಾಣಿ, ಹಾವೇರಿ ಜಿಲ್ಲೆಯನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಕುರಿತು ಈಗಾಗಲೇ ಸಚಿವ ಸಂಪುಟದ ಮೂಲಕ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಲಾಗಿದ್ದು, ಹಾವೇರಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಸರ್ಕಾರ ಹಂತ ಹಂತವಾಗಿ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡುತ್ತಿದ್ದು, ಎರಡನೇ ಪಟ್ಟಿಯಲ್ಲಿ ಹಾವೇರಿ ಜಿಲ್ಲೆಯ ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ. ಪ್ರಸ್ತುತ ಹಾವೇರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ರುದ್ರಪ್ಪ ಲಮಾಣಿ ಹೇಳಿದರು.
ಜಿಲ್ಲೆಯ ರೈತರ ಪರಿಸ್ಥಿತಿ ಹಾಗೂ ಬರದಿಂದ ಉಂಟಾಗಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page