6

ಗಣೇಶೋತ್ಸವ ಹಿನ್ನೆಲೆ ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ಪಥ ಸಂಚಲನ

ಹಾವೇರಿ: ಗಣೇಶೋತ್ಸವದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ನಡೆಸಲಾಯಿತು.

ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಉದ್ದೇಶದಿಂದ ವಿವಿಧ ಪ್ರದೇಶಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಥ ಸಂಚಲನ ನಡೆಸಿದರು.

ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಪಥ ಸಂಚಲನದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಘಟಕಗಳ ಸಿಬ್ಬಂದಿ ಭಾಗವಹಿಸಿದ್ದರು. ಪ್ರಮುಖ ರಸ್ತೆ, ವೃತ್ತ ಹಾಗೂ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿ, ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಯಿತು.

ಪೊಲೀಸ್ ಇಲಾಖೆಯ ಈ ಪಥ ಸಂಚಲನದ ಮೂಲಕ ಸಾರ್ವಜನಿಕರಿಗೆ ಸುರಕ್ಷತೆಯ ಭರವಸೆ ನೀಡುವುದರ ಜೊತೆಗೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂಬ ಸಂದೇಶವನ್ನು ನೀಡಲಾಯಿತು.

Related Posts

ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

You cannot copy content of this page