6

ಬರ ಘೋಷಿಸದಿದ್ದರೆ ರಸ್ತೆ ತಡೆ! ಸರ್ಕಾರಕ್ಕೆ ಜೆಡಿಎಸ್ ಖಡಕ್ ಎಚ್ಚರಿಕೆ

ಹಾನಗಲ್ಲ: ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕನ್ನು ಸಂಪೂರ್ಣ ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹಾನಗಲ್ಲ ಪಟ್ಟಣದ ಕುಮಾರೇಶ್ವರ ಮಠದಿಂದ ತಹಶೀಲ್ದಾರ್ ಕಚೇರಿವರೆಗೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮನಗೌಡ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಹಾನಗಲ್ಲ ತಾಲೂಕಿನಾದ್ಯಂತ ರೈತರು ಮಳೆ ಹಾಗೂ ಬೆಳೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರದಿಂದ ಹಾನಗಲ್ಲ ತಾಲೂಕಿನ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತಾಲೂಕಿನ ರೈತರ ಸಂಕಷ್ಟವನ್ನು ಪರಿಗಣಿಸಿ ರಾಜ್ಯ ಸರ್ಕಾರ ಕೂಡಲೇ ಹಾನಗಲ್ಲ ತಾಲೂಕನ್ನು ಸಂಪೂರ್ಣ ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು. ರೈತರಿಗೆ ಅಗತ್ಯ ಪರಿಹಾರ ಹಾಗೂ ಸರ್ಕಾರದ ಬರ ಪರಿಹಾರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೇ ವೇಳೆ ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಭಾಗವಹಿಸಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page