6

ಹಾನಗಲ್ ಅಭಿವೃದ್ಧಿ ವಿಚಾರ: ಯು.ಟಿ.ಖಾದರ್ ಜೊತೆ ಮಾನೆ ಶ್ರೀನಿವಾಸ ಚರ್ಚೆ

ಬೆಂಗಳೂರು: ಸಚಿವ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಮಾನೆ ಶ್ರೀನಿವಾಸ

ಬೆಂಗಳೂರು: ಹಾನಗಲ್ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಮಾನೆ ಶ್ರೀನಿವಾಸ ಅವರು ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವರಾದ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಹಾನಗಲ್ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಪ್ರಮುಖ ವಿಚಾರಗಳ ಕುರಿತು ಸಚಿವರೊಂದಿಗೆ ಚರ್ಚೆ ನಡೆಸಿದರು.

ವಿಶೇಷವಾಗಿ ಕ್ಷೇತ್ರದ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವುದು, ಸಾರ್ವಜನಿಕರಿಗೆ ಅಗತ್ಯ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳು ಸುಲಭವಾಗಿ ದೊರೆಯುವಂತೆ ಮಾಡುವ ಕುರಿತು ಸಚಿವರ ಗಮನ ಸೆಳೆದರು.

ಇದರ ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿ, ಕ್ಷೇತ್ರದ ಜನರ ಅಗತ್ಯತೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಿಗ್ಗಾಂವಿ-ಸವಣೂರು ಕ್ಷೇತ್ರದ ಶಾಸಕ ಯಾಸೀರಖಾನ್ ಪಠಾಣ ಉಪಸ್ಥಿತರಿದ್ದರು.

Related Posts

ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

You cannot copy content of this page