6

ವೋಟರ್ ಲಿಸ್ಟ್‌ಗೆ ಹೆಸರು ಸೇರಿಸಲು ಸೆ.29 ಕೊನೆಯ ದಿನ!

ನಮೂನೆ-18ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅರ್ಹ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ನಿರಂತರ ಮತದಾರರ ಹೆಸರು ಸೇರ್ಪಡೆ ಪ್ರಕ್ರಿಯೆಯಡಿ ಅರ್ಹರು ನಮೂನೆ-18ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 29, 2026ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಮತದಾರರು ತಮ್ಮ ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ್ ಕಾರ್ಯಾಲಯ ಹಾಗೂ ನಿಗದಿತ ಕಚೇರಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ್ ಬಿ. ದಾನಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರವು ಧಾರವಾಡ, ಉತ್ತರ ಕನ್ನಡ, ಹಾವೇರಿ ಮತ್ತು ಗದಗ ಜಿಲ್ಲೆಗಳನ್ನು ಒಳಗೊಂಡಿದೆ.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅರ್ಹರಾಗಿರುವವರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 29, 2026.

Related Posts

ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

You cannot copy content of this page