6

ಹಾವೇರಿಯಲ್ಲಿ ಏಕಾಏಕಿ ಹೆದ್ದಾರಿ ಬಂದ್!

PF ನಿಯಮ ಬದಲಾವಣೆ: ರಾಷ್ಟ್ರೀಯ ಹೆದ್ದಾರಿ 48 ಬಂದ್ ಮಾಡಿ ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಪ್ರತಿಭಟನೆ

ಹಾವೇರಿ: ಪಿ.ಎಫ್‌ ಹೊಸ ನೀತಿ ಹಾಗೂ ನಿಯಮಾವಳಿಗಳ ಬದಲಾವಣೆಗೆ ಆಕ್ಷೇಪ ವ್ಯಕ್ತಪಡಿಸಿ ಶಾಹಿ ಗಾರ್ಮೆಂಟ್ಸ್‌ನ ನೂರಾರು ಮಹಿಳಾ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿ 48 ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಏಕಾಏಕಿ ರಸ್ತೆಗೆ ಇಳಿದ ಮಹಿಳಾ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಇದರಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಶಾಹಿ ಗಾರ್ಮೆಂಟ್ಸ್‌ನಲ್ಲಿ 3 ಸಾವಿರಕ್ಕೂ ಅಧಿಕ ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಕಳೆದ ಮೂರು ವರ್ಷಗಳಿಂದ ಪಿ.ಎಫ್‌ ಮತ್ತು ಇಎಸ್‌ಐ ಸೌಲಭ್ಯಕ್ಕೆ ಸಂಬಂಧಿಸಿದಂತೆ ತೊಂದರೆ ಎದುರಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಇದೀಗ ಪಿ.ಎಫ್‌ ಹಣ ಹಿಂಪಡೆಯುವ ನಿಯಮಗಳಲ್ಲಿ ಬದಲಾವಣೆಯಾಗಿರುವುದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ ಎಂದು ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಕೆಲಸಕ್ಕೆ ರಾಜೀನಾಮೆ ನೀಡಿದ ಬಳಿಕ 45 ದಿನಗಳಲ್ಲಿ ಪಿ.ಎಫ್‌ ಹಣವನ್ನು ಹಿಂಪಡೆಯಲು ಅವಕಾಶವಿತ್ತು. ಆದರೆ ಹೊಸ ನಿಯಮದ ಪ್ರಕಾರ ಶೇ.75ರಷ್ಟು ಹಣವನ್ನು ಮಾತ್ರ ಹಿಂಪಡೆಯಲು ಸಾಧ್ಯವಾಗುತ್ತಿದ್ದು, ಉಳಿದ ಹಣವನ್ನು ಮೂರು ವರ್ಷಗಳ ಬಳಿಕ ಪಡೆಯಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಮೂರು ವರ್ಷಗಳ ಬಳಿಕ ಹಣ ಪಡೆಯುವುದು ನಮಗೆ ಕಷ್ಟವಾಗಲಿದೆ. ಹೀಗಾಗಿ ಈ ಹಿಂದಿನಂತೆಯೇ ಪಿ.ಎಫ್‌ ನಿಯಮಾವಳಿಯನ್ನು ಮುಂದುವರಿಸಬೇಕು ಎಂದು ಮಹಿಳಾ ಸಿಬ್ಬಂದಿ ಆಗ್ರಹಿಸಿದರು.
ಸತತ ಮೂರು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 48 ತಡೆದು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಅನುಮತಿ ಪಡೆಯದೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿರುವುದಕ್ಕೆ ಪೊಲೀಸರು ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸಪಟ್ಟರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page