6

ಅ.3ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಗುತ್ತಲ, ಹೊಸರಿತ್ತಿ, ನೀರಲಗಿ ಭಾಗದಲ್ಲಿ ಕರೆಂಟ್ ವ್ಯತ್ಯಯ

ಹಾವೇರಿ: ಗುತ್ತಲ 110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 3ರಂದು ಶನಿವಾರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗುತ್ತಲ, ಹೊಸರಿತ್ತಿ ಹಾಗೂ ನೀರಲಗಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಅಕ್ಟೋಬರ್ 3ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಈ ಅವಧಿಯಲ್ಲಿ ಸಂಬಂಧಪಟ್ಟ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ತುರ್ತು ನಿರ್ವಹಣಾ ಕಾಮಗಾರಿಯಿಂದ ವಿದ್ಯುತ್ ವ್ಯವಸ್ಥೆಯ ಸುಧಾರಣೆ ಹಾಗೂ ಸುರಕ್ಷಿತ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕಾಮಗಾರಿ ಅವಧಿಯಲ್ಲಿ ಸಹಕರಿಸುವಂತೆ ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿದ್ಯುತ್ ವ್ಯತ್ಯಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಅಗತ್ಯ ಕೆಲಸಗಳನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Related Posts

ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

You cannot copy content of this page