6

ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಿ: ನ್ಯಾಯಾಧೀಶ ಬಿರಾದಾರ

ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು-ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪ ಎನ್‌.

ಹಾವೇರಿ:ಸ್ವಚ್ಛತಾ ಕಾರ್ಯಕ್ರಮ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದ್ದು, ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು. ಹಾವೇರಿ ಜಿಲ್ಲಾ ನ್ಯಾಯಾಲಯಗಳ ಸಂರ್ಕೀಣದ ಆವರಣದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಜನ್ಮದಿನದ ಅಂಗವಾಗಿ ಶ್ರಮದಾನದ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಚ್ಛತೆ ಇದ್ದಲ್ಲಿ ನಮ್ಮ ಮನೆ. ಮನಸ್ಸು ಸಹ ಸ್ವಚ್ಛವಾಗಿರುತ್ತದೆ. ಪ್ರತಿಯೊಬ್ಬರೂ ಮೊದಲು ನಮ್ಮ ಮನೆ. ಕಚೇರಿ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಮಾಡಿದಲ್ಲಿ ನಮ್ಮ ದೇಶವನ್ನು ಸ್ವಚ್ಛವಾಗಿರಲು ಸಾಧ್ಯ ಹಾಗೂ ಮಹಾತ್ಮಗಾಂಧೀಜಿ ಅವರ ಕನಸು ನನಸಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಶ್ರೀಮತಿ ಅಶ್ವಿನಿ ವಿಜಯ ಶಿರಿಯಣ್ಣನವರ. ರಮೇಶ ಎನ್.ಎಂ.. ಶ್ರೀಮತಿ ಶೋಭಾ ಬಿ.ಜಿ., ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶ್ರೀಶೈಲಜಾ ಎಚ್.ವಿ.. ನ್ಯಾಯಾಧೀಶರಾದ ರಾಹುಲ್ ಆದಿನಾಥ್ ನ್ಯಾಮಗೌಡ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡ್ರ, ಮುಖ್ಯ ಕಾನೂನು ನೆರವು ಅಭಿರಕ್ಷಣಾ ವಕೀಲ ವಿ.ಜಿ.ದೊಡ್ಡಗೌಡರ, ಜಿಲ್ಲಾ ನ್ಯಾಯವಾದಿಗಳ ಸಂಘದ ಸದಸ್ಯರು, ನ್ಯಾಯವಾದಿಗಳು, ಜಿಲ್ಲಾ ನ್ಯಾಯಾಲಗಳ, ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ನಗರಸಭೆ ಸಿಬ್ಬಂದಿ ಭಾಗವಹಿಸಿದ್ದರು

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page