6

ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

ಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ

ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.

ಹಾವೇರಿ ನಗರದ ಖಾಸಗಿ ಶಾಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರೀಕರಿಗಾಗಿ ಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯರು, ಕಿರಿಯರು ಎನ್ನದೇ ಪ್ರತಿಯೊಬ್ಬರೂ ನೃತ್ಯ, ಕಲೆ, ಏಕಪಾತ್ರಾಭಿನಯ, ಸಂಗೀತ, ಯೋಗ, ಪ್ರಾಣಾಯಾಮ ಹಾಗೂ ಧ್ಯಾನ ಎಲ್ಲರಿಗೂ ಅವಶ್ಯವಾಗಿದ್ದು, ಎಲ್ಲರೂ ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಚಿಕ್ಕವಯಸ್ಸಿನಲ್ಲೇ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡುಬಂದರೆ ವಯಸ್ಸಾದರೂ ಆರೋಗ್ಯಯುತ ಜೀವನ ನಡೆಸಬಹುದು ಎಂದು ಹೇಳಿದರು.

ನೃತ್ಯ. ಕಲೆ. ಏಕಪಾತ್ರಾಭಿನಯ, ಸಂಗೀತ, ಚಿತ್ರಕಲೆ, ಯೋಗ, ಪ್ರಾಣಾಯಾಮ, ಧ್ಯಾನ ಕುರಿತು ಹಿರಿಯ ನಾಗರಿಕರಿಗೆ ತರಬೇತಿ ನೀಡಲಾಯಿತು.

ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶ್ರೀಶೈಲಜಾ ಎಚ್.ವಿ.. ನಿವೃತ್ತ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ನಿವೃತ್ತ ಕೃಷಿ ಅಧಿಕಾರಿ ಎಸ್.ಬಿ.ಅಣ್ಣಿಗೇರಿ, ಶಿಕ್ಷಕ ಗುರುರಾಜ ಛಲವಾದಿ, ಶ್ರೀಮತಿ ಪುಷ್ಪಾ, ಶ್ರೀಮತಿ ಮಮತಾ ನಂದಿಹಳ್ಳಿ ಇತರರು ಉಪಸ್ಥಿತರಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಅಂಬೇಡ್ಕರ್ ಅನುಯಾಯಿಗಳಿಗೆ ಗುಡ್‌ನ್ಯೂಸ್..!

    Share this… Facebook Pinterest Twitter Linkedin Whatsappದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳ ಆಯ್ಕೆಗೆ ಅರ್ಜಿ ಆಹ್ವಾನ ಹಾವೇರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 21 ರಂದು ಜರುಗುವ ಪ್ರವರ್ತನಾ ದಿನಕ್ಕೆ(ವಿಜಯದಶಮಿ…

    You cannot copy content of this page