6

ಮೋಹನ ಲಿಂಬಿಕಾಯಿ ಪರ ಹುಕ್ಕೇರಿಮಠ ಕಾಲೇಜಿನಲ್ಲಿ ಮತಯಾಚನೆ

ಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮೋಹನ ಲಿಂಬಿಕಾಯಿ ಅವರ ಪರವಾಗಿ ಕಾಂಗ್ರೆಸ್ ಮುಖಂಡರು ಹಾಗೂ ಪದವೀಧರ ಘಟಕದ ಪದಾಧಿಕಾರಿಗಳು ಹಾವೇರಿ ನಗರದ ಪ್ರತಿಷ್ಠಿತ ಹುಕ್ಕೇರಿಮಠ ಪದವಿಪೂರ್ವ ಹಾಗೂ ಪದವಿ ಕಾಲೇಜಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಕೆಪಿಸಿಸಿ ಪದವೀಧರ ಘಟಕದ ರಾಜ್ಯ ಅಧ್ಯಕ್ಷರು ಹಾಗೂ ಕ್ಯಾಂಪೋಸ್ಟ್ ನಿಗಮದ ಅಧ್ಯಕ್ಷರಾದ ಎ.ಎನ್. ನಟರಾಜಗೌಡ, ಡಿಸಿಸಿ ಜಿಲ್ಲಾ ಅಧ್ಯಕ್ಷರಾದ ಸಂಜೀವಕುಮಾರ ನೀರಲಗಿ, ಪದವೀಧರ ಘಟಕದ ರಾಜ್ಯ ಉಪಾಧ್ಯಕ್ಷರಾದ ನಾಗರಾಜ ಕೋಟಗಿ, ಪ್ರಧಾನ ಕಾರ್ಯದರ್ಶಿ ಕು. ದೇವಿಕಾ, ಸಲೀಮ್ ಸೊನ್ನೆಖಾನ್, ಕಾರ್ಯದರ್ಶಿ ರಾಘವೇಂದ್ರ ಬಾಸೂರು, ಆಶ್ರಯ ಸಮಿತಿ ಸದಸ್ಯರಾದ ರಾಧಾ ಸವಣೂರ, ಮಹಿಳಾ ಅಧ್ಯಕ್ಷೆ ಹಾಗೂ ವಕೀಲರಾದ ಕು. ವಸಂತ ಬಾಗೂರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಮತಯಾಚನೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಹುಕ್ಕೇರಿಮಠದ ಚೇರ್ಮನ್ ಮುಷ್ಟಿರವರು ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಭೇಟಿಯಾಗಿ, ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡುವ ಮೂಲಕ ಮುಖಂಡರು ಮತದಾರರನ್ನು ಸಂಪರ್ಕಿಸಿದರು.

Related Posts

ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

You cannot copy content of this page