6

ಹಾವೇರಿಯಲ್ಲಿ ಪೊಲೀಸ್ ಹುತಾತ್ಮರಿಗೆ ಗೌರವ ನಮನ

ಕರ್ತವ್ಯದಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ತ್ಯಾಗ ಸ್ಮರಣೀಯ:
ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಂ.ಜಿ. ಶಿವಳ್ಳಿ ಅಭಿಮತ
*ಕಾಕಿ ಸಮವಸ್ತ್ರ ಕೇವಲ ಉದ್ಯೋಗದ ಸಂಕೇತವಲ್ಲ, ಅದು ಕರ್ತವ್ಯ, ಶಿಸ್ತು ಮತ್ತು ದೇಶಸೇವೆಯ ಪ್ರತೀಕ

ಹಾವೇರಿ,ಅ. 21: ದೇಶದ ಆಂತರಿಕ ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕರ್ತವ್ಯದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್ 21ರಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಂ.ಜಿ. ಶಿವಳ್ಳಿ ಹೇಳಿದರು.

ನಗರದ ಕೆರಿಮತ್ತಿಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುದುವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ದೇಶದ ಜನರು ನೆಮ್ಮದಿಯಿಂದ ಬದುಕಲು ಹಗಲಿರುಳು ಶ್ರಮಿಸುವ ಪೊಲೀಸ್ ಸಿಬ್ಬಂದಿಯ ಸೇವೆ ಮತ್ತು ಸಮರ್ಪಣೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಅವರು ಮಾತನಾಡಿ, ದೇಶದ ಆಂತರಿಕ ಭದ್ರತೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ಕರ್ತವ್ಯದಲ್ಲಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆ, ತ್ಯಾಗ ಹಾಗೂ ಬಲಿದಾನ ಸದಾ ಸ್ಮರಣೀಯವಾಗಿದೆ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ದೇಶದ ಗಡಿ ರಕ್ಷಣೆಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರ ಪೊಲೀಸರ ಸ್ಮರಣಾರ್ಥ ಪ್ರತಿವರ್ಷ ಅಕ್ಟೋಬರ್ 21ರಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದರು.
1959ರ ಅ. 21ರಂದು ವೀರ ಪೊಲೀಸರ ಬಲಿದಾನ ಸ್ಮರಣೆ

1959ರ ಅಕ್ಟೋಬರ್ 21ರಂದು ಡಿವೈಎಸ್‌ಪಿ ಕರಣ್ ಸಿಂಗ್ ಅವರ ನೇತೃತ್ವದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಪೊಲೀಸ್ ತಂಡವೊಂದು ಭಾರತ-ಚೀನಾ ಗಡಿಯ ಲಡಾಖ್‌ನ ಹಾಟ್ ಸ್ಪ್ರಿಂಗ್ಸ್ ಪ್ರದೇಶದಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿತ್ತು. ಈ ಸಂದರ್ಭದಲ್ಲಿ ಚೀನಾದ ಸೈನಿಕರು ಅತಿಕ್ರಮಣ ನಡೆಸಿದಾಗ, ಸೀಮಿತ ಶಸ್ತ್ರಾಸ್ತ್ರಗಳಿದ್ದರೂ ಭಾರತೀಯ ಪೊಲೀಸರು ಧೈರ್ಯ ಮತ್ತು ಸಾಹಸದಿಂದ ಎದುರಿಸಿದರು. ಈ ಹೋರಾಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿ ಪ್ರಾಣಾರ್ಪಣೆ ಮಾಡಿದರು. ಉಳಿದವರನ್ನು ಚೀನಾದ ಪಡೆ ಬಂಧಿಸಿತು ಎಂದು ಘಟನೆಯನ್ನು ಸ್ಮರಿಸಿದರು.

ಹುತಾತ್ಮರಿಗೆ ಗೌರವ ನಮನ:
ಪೊಲೀಸ್ ಹುತಾತ್ಮರಿಗೆ ಗೌರವ ಸಲ್ಲಿಸುವ ಸಲುವಾಗಿ ಪರೇಡ್ ಕಮಾಂಡರ್ ಆರ್‌ಪಿಐ ಪ್ರದೀಪ್ ಪಿ ಆರ್ ಅವರ ನೇತೃತ್ವದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಲಾಯಿತು. ಬಳಿಕ ಹುತಾತ್ಮರ ಸ್ಮರಣಾರ್ಥ ಮೌನಾಚರಣೆ ನಡೆಸಲಾಯಿತು. ಪೊಲೀಸ್ ಬ್ಯಾಂಡ್ ಮೂಲಕ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಧೀಶ ರಾಹುಲ್ ನ್ಯಾಮಗೋಡ್ರ, ಜಿಲ್ಲೆಯ ವಿವಿಧ ವಿಭಾಗಗಳ ಡಿವೈಎಸ್‌ಪಿಗಳು, ಸಿಪಿಐಗಳು, ಪಿಎಸ್‌ಐಗಳು, ಎಎಸ್‌ಐಗಳು, ಪೊಲೀಸ್ ಸಿಬ್ಬಂದಿಗಳು, ಸಮಾಜ ಸೇವಕರು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

Related Posts

ವಿಜಯೇಂದ್ರ–ಯತ್ನಾಳ್ ಭೇಟಿ ವಿಚಾರ: ಬೊಮ್ಮಾಯಿ ಹೇಳಿದ್ದೇನು?

Share this… Facebook Pinterest Twitter Linkedin Whatsappಸ್ಟಿಂಗ್ ಪ್ರಕರಣ ಸಿಬಿಐ ತನಿಖೆಯಾಗಲಿ; ಬಿಜೆಪಿ ಒಗ್ಗಟ್ಟಿನಿಂದ ಹೋದರೆ ದೊಡ್ಡ ಗೆಲುವು: ಬಸವರಾಜ ಬೊಮ್ಮಾಯಿ ಹಾವೇರಿ: ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಪೈಪೋಟಿ ಮಾತ್ರ ಇರುತ್ತದೆ. ಬಿಜೆಪಿ ನಾಯಕರು ಒಗ್ಗಟ್ಟಿನಿಂದ ಒಂದೇ ಧ್ವನಿಯಾಗಿ…

ಅ. 22 ಮತ್ತು 23ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share this… Facebook Pinterest Twitter Linkedin Whatsapp*ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಮತಗಟ್ಟೆ ಸ್ಥಾಪನೆ ಮಾಡಿದ ಶಾಲಾ – ಕಾಲೇಜುಗಳಿಗೆ ರಜೆ* ಹಾವೇರಿ : ಅ.21: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವು ದಿನಾಂಕ 23.10.2026 ರಂದು…

You cannot copy content of this page