ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣಾ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‌ನಲ್ಲಿ (85- ಹಾವೇರಿ) ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸಾಮಾನ್ಯ ಮತದಾರರಂತೆ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬೆಕಾಯಿ ಅವರ ಪರವಾಗಿ ಬೆಂಬಲ ಕೋರಿದರು. “ಪ್ರಜಾಪ್ರಭುತ್ವ ವ್ಯವಸ್ಥೆಯ ಯಶಸ್ಸಿನಲ್ಲಿ ಪ್ರತಿಯೊಬ್ಬರ ಮತವೂ ಅತ್ಯಂತ ಪವಿತ್ರ ಹಾಗೂ ಮಹತ್ವದ್ದಾಗಿದೆ. ವಿದ್ಯಾವಂತ ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸುವ ಮೂಲಕ ನಮ್ಮ ಸಂವಿಧಾನಬದ್ಧ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು,” ಎಂದು ಸಚಿವ ರುದ್ರಪ್ಪ ಲಮಾಣಿ ಈ ಸಂದರ್ಭದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ್ ಕುಮಾರ್ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ, ಶಹರ್ ಘಟಕದ ಅಧ್ಯಕ್ಷ ಜಿಎಸ್ ಅಂದಾನೆ ಗೌಡ್ರು, ಕಾರ್ಯಕರ್ತರಾದ ಉಮರ್ ನದಾಫ್ ಜಾಫರ್, ಕರಬಸಪ್ಪ ಹಲಗನ್ನವರ್, ಪ್ರಸನ್ನ ಹಿರೇಮಠ್ ಉಮ್ಮೆದ್ ನದಾಫ್, ಜಮೀರ್ ಜಿಗರಿ ಅತ್ತಾವುಲ್ಲಾ ಕಾಜಿ, ದಾಸಪ್ಪ ಕರ್ಜಗಿ ವೆಂಕಟೇಶ್ ಬಿಜಾಪುರ್ ಸೇರಿದಂತೆ ಕಾರ್ಯಕರ್ತರು ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು..








