6

ಹಾವೇರಿ ಮತದಾರರ ಅಂತಿಮ ಪಟ್ಟಿ ಪ್ರಕಟ | ನಿಮ್ಮ ಹೆಸರು ಪರಿಶೀಲಿಸಿ

ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲಿಸಿಕೊಳ್ಳಲು ಸಲಹೆ

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ದಿನಾಂಕ 27-10-2026ರಂದು ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಸಂಬಂಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರು ತಮ್ಮ ಮತಗಟ್ಟೆ, ತಹಶೀಲ್ದಾರ್ ಕಚೇರಿ ಹಾಗೂ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

12.33 ಲಕ್ಷ ಮತದಾರರು

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂತಿಮ ಮತದಾರರ ಪಟ್ಟಿಯಲ್ಲಿ 6,28,297 ಪುರುಷ, 6,04,969 ಮಹಿಳಾ ಹಾಗೂ 28 ಇತರೆ ಮತದಾರರು ಸೇರಿ ಒಟ್ಟು 12,33,294 ಮತದಾರರಿದ್ದಾರೆ.

6,875 ಯುವ ಮತದಾರರ ಹೆಚ್ಚಳ

ದಿನಾಂಕ 24-08-2026ರಂದು ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ 5,396 ಪುರುಷರು ಹಾಗೂ 4,562 ಮಹಿಳಾ ಮತದಾರರು ಸೇರಿ 9,961 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 6,875 ಮತದಾರರು ಅಧಿಕವಾಗಿದ್ದಾರೆ. ಎಲ್ಲರ ಸಹಕಾರದಿಂದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.

ಮತದಾರರ ಪಟ್ಟಿಯಲ್ಲಿ ಒಂದು ವೇಳೆ ಹೆಸರು ಬಿಟ್ಟು ಹೋಗಿದ್ದರೆ ಗೊಂದಲಕ್ಕೆ ಒಳಗಾಗಬಾರದು. ನಮೂನೆ-6 ಭರ್ತಿ ಮಾಡಿ ಸಲ್ಲಿಸಬಹುದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಕಾರ್ಯ ನಿರಂತರವಾಗಿ ನಡೆಯುತ್ತದೆ. ಇದೇ ಜಿಲ್ಲೆಯಲ್ಲಿ 77 ಮತಗಟ್ಟೆಗಳನ್ನು ಹೆಚ್ಚಳ ಮಾಡಿದ್ದರಿಂದ ತಮ್ಮ ಹೆಸರು ಅಕ್ಕಪಕ್ಕದ ಮತಗಟ್ಟೆಯಲ್ಲಿ ಬಂದಿರಬಹುದು. ಹಾಗಾಗಿ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

ಹಾವೇರಿ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾಗಿ ಹಣಕಾಸು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಐಎಎಸ್ ಅಧಿಕಾರಿ ಡಾ. ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ರಾಜ್ಯ ಇವರ ಅಧಿಕೃತ ಜಾಲತಾಣ https://ceokarnataka.gov.in ನಲ್ಲಿ ಹಾಗೂ ಜಿಲ್ಲೆಯ ಅಧಿಕೃತ ಜಾಲತಾಣ https://Haveri.nic.in/special-intensive-revision-2026/Final-Roll-Publication ನಲ್ಲಿ ಲಭ್ಯವಿದ್ದು, ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದು ಹಾಗೂ ಸರಿಯಾದ ಹೆಸರನ್ನು ದಾಖಲೆಗಳೊಂದಿಗೆ ನೋಂದಾಯಿಸಿರುವ ಬಗ್ಗೆ ದೃಢಪಡಿಸಿಕೊಳ್ಳಬಹುದು ಎಂದರು.

ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಜನವರಿ 01ರವರೆಗೆ ಕಾಯಬೇಕಾಗಿಲ್ಲ. 17 ವರ್ಷ ವಯಸ್ಸು ದಾಟಿದ ಯುವ ಜನಾಂಗ ಮುಂಗಡ ಅರ್ಜಿ ಸಲ್ಲಿಸುವ ಸೌಲಭ್ಯ ನೀಡಲಾಗಿದೆ.

“ಜನವರಿ 01ರ ಅರ್ಹತಾ ದಿನಾಂಕದ ಜೊತೆಗೆ 01ನೇ ಏಪ್ರಿಲ್, 01ನೇ ಜುಲೈ ಮತ್ತು 01ನೇ ಅಕ್ಟೋಬರ್” ರಂದು ಹೆಸರುಗಳ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಆಯಾ ತ್ರೈಮಾಸಿಕದಲ್ಲಿ 18 ವರ್ಷ ತುಂಬುವ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಜೊತೆಗೆ ಮತದಾರರ ಭಾವಚಿತ್ರದ ಗುರುತಿನ ಚೀಟಿಯನ್ನು ಸಹ ವಿತರಿಸಲಾಗುವುದು.

ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 01ನೇ ಏಪ್ರಿಲ್, 01ನೇ ಜುಲೈ ಮತ್ತು 01ನೇ ಅಕ್ಟೋಬರ್‌ಗೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆವರೆಗೆ ಕಾಯುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ ಚಲಾಯಿಸಲು ಅವಕಾಶ ದೊರೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ಅಧಿಸೂಚಿತ ಮತದಾರರ ನೋಂದಣಾಧಿಕಾರಿಗಳು / ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ನಿಗದಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಲು ಹೆಚ್ಚಿನ ಆದ್ಯತೆ ನೀಡಲಾಗಿದೆ.

ಸಾರ್ವಜನಿಕರು ನಿರಂತರ ಪರಿಷ್ಕರಣೆಯ ಅವಧಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಆನ್‌ಲೈನ್ ಮೂಲಕ (Voters Service Portal, VHA mobile App, BLOಗಳ ಮೂಲಕ BLO Appನಲ್ಲಿ) ಸಲ್ಲಿಸಲು ಕ್ರಮವಹಿಸಲಾಗುತ್ತಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್., ವಿವಿಧ ರಾಜಕೀಯ ಪಕ್ಷದ ಮುಖಂಡರಾದ ರುದ್ರಪ್ಪ ಜಾಬಿನ್, ಅಮೀರ್‌ಜಾನ್ ಬೇಪಾರಿ, ಶಂಕರ ಮೆಹರವಾಡೆ, ಹನಮಂತಪ್ಪ ಕಬ್ಬೇರ್, ಅಶೋಕ ಮರಿಯಮ್ಮನವರ, ಸಂತೋಷ ಆಲದಕಟ್ಟಿ ಇತರರು ಉಪಸ್ಥಿತರಿದ್ದರು.

Related Posts

ಹಾವೇರಿ ಮುನ್ಸಿಪಲ್ ಶಾಲಾ 12 ವಿದ್ಯಾರ್ಥಿಗಳು, ರಾಜ್ಯಮಟ್ಟಕ್ಕೆ ಆಯ್ಕೆ

Share this… Facebook Pinterest Twitter Linkedin Whatsappಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ: 12 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ ಹಾವೇರಿ: ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಂಡರ್‌-17 ಕ್ರೀಡಾಕೂಟದಲ್ಲಿ ಹಾವೇರಿಯ ಮುನ್ಸಿಪಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ…

ಕಾಂಗ್ರೆಸ್ ತೊರೆದು ಕಮಲ ಹಿಡಿದ ಹಳ್ಳೂರಿನ ಮುಖಂಡರು

Share this… Facebook Pinterest Twitter Linkedin Whatsappಹಳ್ಳೂರಿನಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಮುಖಂಡರು; ಚುನಾವಣೆಗೆ ಮುನ್ನವೇ ರಾಜಕೀಯ ಚಟುವಟಿಕೆ ಚುರುಕು ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಹಾಗೂ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿ,…

You cannot copy content of this page