6

ತಂಬಾಕು ನಿಯಂತ್ರಣಕ್ಕೆ ಪೊಲೀಸ್ ಸಿಬ್ಬಂದಿಗೆ ತರಬೇತಿ

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ – ಒಂದು ದಿನದ ತರಬೇತಿ

ಹಾವೇರಿ: ಅ.29: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೋಟ್ಪಾ ಕಾಯ್ದೆ 2003 ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಚಿಕಿತ್ಸಾ ಸೌಲಭ್ಯಗಳ ಕುರಿತು ಜಿಲ್ಲೆಯ ಆಯ್ದ ಪೊಲೀಸ್ ಠಾಣೆಯ ಪಿಎಸ್‌ಐ, ಎಎಸ್‌ಐಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಹಾವೇರಿ ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಗುರುವಾರ ಜರುಗಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ಅವರು ಉದ್ಘಾಟನೆ ನೆರವೇರಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ. ಸಂತೋಷ ದಡ್ಡಿ ಮತ್ತು ದಾದಾಪೀರ ಹುಲಿಕಟ್ಟಿ ಅವರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಚಟುವಟಿಕೆ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಕೋಟ್ಪಾ ಕಾಯ್ದೆ 2003ರ ಅನುಷ್ಠಾನದ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಜಗದೀಶ ಪಾಟೀಲ, ಶಹರ ಪೊಲೀಸ್ ಠಾಣೆ ಸಿಪಿಐ ಮೋತಿಲಾಲ್ ಪವಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Posts

ಹಾವೇರಿ ಮುನ್ಸಿಪಲ್ ಶಾಲಾ 12 ವಿದ್ಯಾರ್ಥಿಗಳು, ರಾಜ್ಯಮಟ್ಟಕ್ಕೆ ಆಯ್ಕೆ

Share this… Facebook Pinterest Twitter Linkedin Whatsappಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ: 12 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ ಹಾವೇರಿ: ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಂಡರ್‌-17 ಕ್ರೀಡಾಕೂಟದಲ್ಲಿ ಹಾವೇರಿಯ ಮುನ್ಸಿಪಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ…

ಹಾವೇರಿ: ವಿಕಲಚೇತನರಿಗೆ ಆನ್‌ಲೈನ್ ಅರ್ಜಿ ಆಹ್ವಾನ

Share this… Facebook Pinterest Twitter Linkedin Whatsappವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಹಾವೇರಿ: ಅ.29 – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026–27ನೇ ಸಾಲಿನ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು…

You cannot copy content of this page