6

ಹಾವೇರಿ : ಸಚಿವರ ಮನೆ ಮುಂದೆ ಕಬ್ಬು ಸುರಿದು ಪ್ರತಿಭಟನೆ

ಹಾವೇರಿಯಲ್ಲಿ ಕಬ್ಬಿಗೆ ₹5,500 ದರ ನಿಗದಿಗೆ ರೈತರ ಪಟ್ಟು; ಸಕ್ಕರೆ ಸಚಿವರ ಮನೆ ಮುಂದೆ ಪ್ರತಿಭಟನೆ

ಟ್ರ್ಯಾಕ್ಟರ್ ಸಮೇತ ಆಗಮಿಸಿ ಸಚಿವರ ಮನೆ ಮುಂದೆ ಕಬ್ಬು ಸುರಿದು ರೈತರ ಆಕ್ರೋಶ

ಹಾವೇರಿ: ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವಂತೆ ಆಗ್ರಹಿಸಿ ಹಾವೇರಿಯಲ್ಲಿ ಕಬ್ಬು ಬೆಳೆಗಾರರು ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದರು.

filter: 0; fileterIntensity: 0.0; filterMask: 0; captureOrientation: 0;
brp_mask:0;
brp_del_th:null;
brp_del_sen:null;
delta:null;
module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

ಕಬ್ಬಿನ ದರ ನಿಗದಿಪಡಿಸದೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಿರುವುದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಟ್ರ್ಯಾಕ್ಟರ್‌ಗಳಲ್ಲಿ ಕಬ್ಬು ತುಂಬಿಕೊಂಡು ಸಚಿವರ ಮನೆ ಮುಂದೆ ಆಗಮಿಸಿದ ರೈತರು, ಅಲ್ಲಿಯೇ ಕಬ್ಬು ಸುರಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

 

ಜಿ.ಎಂ.-2, ತಿಮ್ಮನಕಟ್ಟಿ ಹಾಗೂ ಮುಂಡರಗಿ ಸಕ್ಕರೆ ಕಾರ್ಖಾನೆಗಳು ರೈತರೊಂದಿಗೆ ದರದ ಕುರಿತು ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದೇ ರಾತ್ರೋರಾತ್ರಿ ಕಾರ್ಖಾನೆಗಳನ್ನು ಆರಂಭಿಸಿವೆ ಎಂದು ರೈತರು ಆರೋಪಿಸಿದರು.

filter: 0; fileterIntensity: 0.0; filterMask: 0; captureOrientation: 0;
brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

ಮೊದಲು ಕಬ್ಬಿನ ದರ ನಿಗದಿಪಡಿಸಿ, ನಂತರವೇ ಕಾರ್ಖಾನೆಗಳನ್ನು ಆರಂಭಿಸಬೇಕು. ತಕ್ಷಣವೇ ಕಾರ್ಖಾನೆಗಳ ಕಾರ್ಯಾಚರಣೆ ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ರೈತರು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದು ರೈತರ ಸಮಸ್ಯೆ ಆಲಿಸಲೇಬೇಕು ಎಂದು ಪಟ್ಟು ಹಿಡಿದರು.

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಯಾಗುವವರೆಗೂ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಾರದು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

Related Posts

ಹಾವೇರಿ ಮುನ್ಸಿಪಲ್ ಶಾಲಾ 12 ವಿದ್ಯಾರ್ಥಿಗಳು, ರಾಜ್ಯಮಟ್ಟಕ್ಕೆ ಆಯ್ಕೆ

Share this… Facebook Pinterest Twitter Linkedin Whatsappಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ: 12 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ ಹಾವೇರಿ: ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಂಡರ್‌-17 ಕ್ರೀಡಾಕೂಟದಲ್ಲಿ ಹಾವೇರಿಯ ಮುನ್ಸಿಪಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ…

ಹಾವೇರಿ: ವಿಕಲಚೇತನರಿಗೆ ಆನ್‌ಲೈನ್ ಅರ್ಜಿ ಆಹ್ವಾನ

Share this… Facebook Pinterest Twitter Linkedin Whatsappವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಹಾವೇರಿ: ಅ.29 – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026–27ನೇ ಸಾಲಿನ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು…

You cannot copy content of this page