6

ಅಧಿಕಾರಿಗಳ ವಿಳಂಬ ಧೋರಣೆಗೆ ಶಾಸಕ ಗರಂ!

ಹಾವೇರಿ ಬಾಂದಾರ್ ದುರಸ್ತಿಗೆ ಶಾಸಕ ಬಸವರಾಜ್ ಶಿವಣ್ಣನವರ್ ಸೂಚನೆ

ಹಾವೇರಿ | ಪ್ರಜಾ ಆಂದೋಲನ ಸಭೆ

ಹಾವೇರಿ: 35 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಬಾಂದಾರ್ ಈಗ ದುರಸ್ತಿಯ ಅಗತ್ಯವಿದೆ. ಈ ವರ್ಷ ಬರಗಾಲವಿದ್ದು, ರೈತರು ಹಾಗೂ ಸಾರ್ವಜನಿಕರು ಸಂಕಷ್ಟದಲ್ಲಿದ್ದಾರೆ. ಬಾಂದಾರ್‌ನಿಂದ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಶಾಸಕ ಬಸವರಾಜ್ ಶಿವಣ್ಣನವರ್ ಅಧಿಕಾರಿಗಳಿಗೆ ಸೂಚಿಸಿದರು.

ಹಾವೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಜಾ ಆಂದೋಲನ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳಿವೆ. ಅಧಿಕಾರಿಗಳ ವಿಳಂಬ ಧೋರಣೆಯಿಂದ ರೈತರು ಅನಗತ್ಯ ತೊಂದರೆ ಅನುಭವಿಸಬೇಕಾಗುತ್ತದೆ. ಯಾವುದೇ ಕೆಲಸದಲ್ಲಿ ವಿಳಂಬ ಮಾಡದೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಜನರಿಗೆ ಉತ್ತಮ ಸೇವೆ ಒದಗಿಸಬೇಕು. ರೈತರು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಬೇಕು ಎಂದು ಶಾಸಕ ಬಸವರಾಜ್ ಶಿವಣ್ಣನವರ್ ತಿಳಿಸಿದರು.

  • Related Posts

    ಕಬ್ಬಿನ ದರ ಚರ್ಚೆಗೆ ನ.12ರಂದು ಹಾವೇರಿಗೆ ಚುನ್ನಪ್ಪ ಪೂಜಾರಿ!

    Share this… Facebook Pinterest Twitter Linkedin Whatsappಕಬ್ಬು ಬೆಲೆ ನಿರ್ಧಾರಕ್ಕೆ ನ.12ರಂದು ಹಾವೇರಿಗೆ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಭೇಟಿ! ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ದರದ ಕುರಿತು ಚರ್ಚೆ – ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಲು ಮನವಿ…

    ಹಾವೇರಿಯಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ

    Share this… Facebook Pinterest Twitter Linkedin Whatsappಇಂದು ಹಾವೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಧಾರವಾಡ ವಿಭಾಗದ ವತಿಯಿಂದ ಏರ್ಪಡಿಸಿದ *ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ* ಎಂಬ ಪಾದಯಾತ್ರೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ…

    You cannot copy content of this page