6

ಸ್ವ ಉದ್ಯೋಗಕ್ಕೆ ಸುವರ್ಣಾವಕಾಶ

ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ ಶುರು ಮಾಡಲಿದೆ.
ಸ್ವ ಉದ್ಯೋಗ ಮಾಡಲು ಆಸಕ್ತಿ ಇರುವವರು ಜು 31ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು 18ರಿಂದ 45 ವರ್ಷದ ಒಳಗಿನವರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಹೊಂದಿರಬೇಕು ಎಂಬ ನಿಯಮಗಳಿವೆ. ತರಬೇತಿ ಸಂಪೂರ್ಣ ಉಚಿತವಾಗಿದ್ದು, ಊಟ ಹಾಗೂ ವಸತಿಯನ್ನು ಕೊಡಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಳಾಸ
ರುಡ್‌ಸೆಟ್ ಸಂಸ್ಥೆ
ಅರಿಶಿನಕುoಟೆ, ನೆಲಮಂಗಲ ತಾಲ್ಲೂಕು,
ಬೆಂಗಳೂರು ಗ್ರಾಮಾಂತರ ಜಿಲ್ಲೆ
ದೂರವಾಣಿ ಸಂಖ್ಯೆ: 9740982585, 9380162042

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page