6

`ಯಲ್ಲಾಪುರಕ್ಕೆ ಬೇಕು ಸುಸಜ್ಜಿತ ಮೀನು ಮಾರುಕಟ್ಟೆ’

ಯಲ್ಲಾಪುರ: `ಪಟ್ಟಣ ಪ್ರದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು, ಅದಕ್ಕೆ ಅನುಗುಣವಾಗಿ ಸೂಕ್ತ ಮಾರುಕಟ್ಟೆ ಇಲ್ಲ. ಅದರಲ್ಲಿಯೂ ಮುಖ್ಯವಾಗಿ ಪಟ್ಟಣಕ್ಕೆ ಇನ್ನೂ ಎರಡು ಮೀನು ಮಾರುಕಟ್ಟೆ ಅಗತ್ಯ’ ಎಂದು ಪಟ್ಟಣ ಪಂಚಾಯತ ಸದಸ್ಯ ಸತೀಶ ನಾಯ್ಕ ಹೇಳಿದ್ದಾರೆ. ಮತ್ತೆ ಎರಡು ಮೀನು ಮಾರುಕಟ್ಟೆ ನಿರ್ಮಿಸುವುದರಿಂದ ವ್ಯಾಪಾರ-ವಹಿವಾಟು ಹೆಚ್ಚಳವಾಗಿ ಪಂಚಾಯತ ಆದಾಯ ಹೆಚ್ಚಾಗಲಿದೆ ಎಂಬುದು ಅವರ ಆರ್ಥಿಕ ಲೆಕ್ಕಾಚಾರ.
ಇದೀಗ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಮೀನು ಮಾರಾಟ ನಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಉತ್ತಮ ಮಾರುಕಟ್ಟೆ ಒದಗಿಸಿದಲ್ಲಿ ಎಲ್ಲರಿಗೂ ಅನುಕೂಲ’ ಎಂದು ಅವರು ಹೇಳಿದ್ದಾರೆ. `ಮಂಜುನಾಥ ನಗರದ ಬಳಿಯಿರುವ ಹೆಬ್ಬಾರ್ ನಗರದಲ್ಲಿ 2 ಸಾವಿರಕ್ಕೂ ಅಧಿಕ ಜನ ವಾಸಿಸಲಿದ್ದಾರೆ. ಆ ಭಾಗದಲ್ಲಿಯೇ ಮೀನು ಮಾರುಕಟ್ಟೆ ನಿರ್ಮಿಸಿದರೆ ಸ್ವಚ್ಛತೆ ಕಾಪಾಡಲು ಸಹಕಾರಿ’ ಎಂದಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page