6

ಜನಸ್ಪಂದನಾ ಸಭೆ: ಪ ಪಂ ಪ್ರತಿನಿಧಿಗಳಿಗೆ ಇಲ್ಲ ಆಮಂತ್ರಣ

ಯಲ್ಲಾಪುರ: ತಾಲೂಕು ಮಟ್ಟದ ಜನಸ್ಪಂದನಾ ಸಭೆಯಲ್ಲಿ ಪಟ್ಟಣ ಪಂಚಾಯತ ಜನಪ್ರತಿನಿಧಿಗಳಿಗೆ ಆಹ್ವಾನವೇ ಇರಲಿಲ್ಲ. ಈ ಬಗ್ಗೆ ಪಟ್ಟಣ ಪಂಚಾಯತ ಸದಸ್ಯ ಸೋಮು ನಾಯ್ಕ ಆಕ್ರೋಶ ಹೊರಹಾಕಿದ್ದಾರೆ.
`ಪಟ್ಟಣ ವ್ಯಾಪ್ತಿಯಲ್ಲಿರುವ ಅನೇಕ ಸಮಸ್ಯೆಗಳ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಮಾತನಾಡುತ್ತಿದ್ದರು. ರವೀಂದ್ರನಗರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈ ಬಗ್ಗೆ ಜನಸ್ಪಂದನಾ ಸಭೆಯಲ್ಲಿ ಚರ್ಚಿಸಬೇಕಿತ್ತು. ಶಾಸಕರು ಹಾಗೂ ಅಧಿಕಾರಿಗಳು ಪಟ್ಟಣ ಪಂಚಾಯತ ಸದಸ್ಯರನ್ನು ವಿಶ್ವಾಸಕ್ಕೆ ಪಡೆದಿಲ್ಲ’ ಎಂದವರು ದೂರಿದರು.
ಪಟ್ಟಣವನ್ನು ಡೆಂಗ್ಯು ಸಮಸ್ಯೆ ಕಾಡುತ್ತಿದೆ. ಹೆಬ್ಬಾರ್ ನಗರದಲ್ಲಿ ಬಡವರಿಗೆ ಮನೆ ನಿರ್ಮಾಣ ವಿಷಯದಲ್ಲಿ ಅನ್ಯಾಯವಾಗಿದೆ. ಮನೆ ಸಿಗುವ ಕನಸಿನಿಂದ ಹಣ ಪಾವತಿಸಿದವರಿಗೆ ಈವರೆಗೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಈ ಹಿಂದೆ ರವೀಂದ್ರ ನಗರದಲ್ಲಿ ಸಹ ಮನೆ ನಿರ್ಮಾಣ ವಿಷಯವಾಗಿ ಗುದ್ದಲಿ ಪೂಜೆ ನಡೆದಿತ್ತು. ನಂತರ ಅದು ನೆನೆಗುದಿಗೆ ಬಿದ್ದಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ನಮಗೆ ಅವಕಾಶ ಇರಲಿಲ್ಲ’ ಎಂದವರು ಹೇಳಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page