6

ಮಳೆ ಅವಾಂತರ: ಪ್ರವಾಸಿ ತಾಣಗಳ ಪ್ರವೇಶ ನಿಷೇಧ

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜಲಪಾತಗಳು ಮೈ ತುಂಬಿ ಹರಿಯುತ್ತಿದೆ. ಆದರೆ, ಬಹುತೇಕ ಕಡೆ ಜಲಪಾತಗಳ ಪ್ರವೇಶಕ್ಕೆ ತಡೆ ಒಡ್ಡಲಾಗಿದೆ.
ಜಲಪಾತದ ಬುಡದಲ್ಲಿ ಹಾಗೂ ರಸ್ತೆಗಳಲ್ಲಿ ಗುಡ್ಡ ಕುಸಿತದ ಲಕ್ಷಣಗಳಿರುವುದರಿಂದ ಈ ಮುನ್ನಚ್ಚರಿಕೆ ಕೈಗೊಳ್ಳಲಾಗಿದೆ. ಕಳೆದ ಕೆಲ ವರ್ಷಗಳ ವಿದ್ಯಮಾನಗಳನ್ನು ಗಮನಿಸಿದರೆ, ಪ್ರವಾಸಿಗರ ಹುಚ್ಚಾಟದಿಂದ ಮಳೆಗಾಲದಲ್ಲಿ ಅನೇಕ ಅವಾಂತರಗಳು ನಡೆದಿದ್ದವು. ಈ ಹಿನ್ನಲೆ ಪ್ರವಾಸಿಗರ ಮೇಲೆ ನಿಗಾ ಇಡುವುದು ಕಷ್ಟ ಎಂದು ಅರಿತು ಅರಣ್ಯ ಇಲಾಖೆ ತನ್ನ ವ್ಯಾಪ್ತಿಯಲ್ಲಿ ಬರುವ ಪ್ರವಾಸಿತಾಣಗಳ ಪ್ರವೇಶ ನಿರಾಕರಿಸಿದೆ.
ಪ್ರಸ್ತುತ ಪ್ರಸಿದ್ಧ ಸಾತೊಡ್ಡಿ ಜಲಪಾತ, ಶಿರಲೆ ಜಲಪಾತ, ಕುಳಿ ಮಾಗೋಡು ಜಲಪಾತಕ್ಕೆ ತೆರಳಲು ಅವಕಾಶವಿಲ್ಲ. ಜೊತೆಗೆ ಫಣಸಗುಳಿ ಸೇತುವೆ ಮೇಲೆ ಅಪಾಯಕಾರಿ ರೀತಿಯಲ್ಲಿ ನೀರಿನ ಹರಿವು ಇದ್ದಿದ್ದರಿಂದ ಇಲ್ಲಿ ಸಹ `ಪ್ರವೇಶವಿಲ್ಲ’ ಎಂಬ ನಾಮಫಲಕ ಅಳವಡಿಸಲಾಗಿದೆ. ಇನ್ನೂ, ಜಲಪಾತಗಳ ಸಮೀಪ ಮನೆಗಳನ್ನು ಹೊಂದಿರುವ ಸ್ಥಳೀಯರ ಓಡಾಟಕ್ಕೆ ಯಾವುದೇ ಸಮಸ್ಯೆ ಇಲ್ಲ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page