6

ಡೆಂಗ್ಯುಗೆ ಬಲಿಯಾದ ಹರೆರಾಮ

ಮಾಜಿ ಶಾಸಕ ಉಮೇಶ ಭಟ್ಟ ಅವರ ಅಣ್ಣನ ಮೊಮ್ಮಗ ಹರೆರಾಮ ಭಟ್ಟ ಬಾವಿಕೇರಿ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ.
`ಲೋಕಧ್ವನಿ’ ಪತ್ರಿಕೆ ಉಮೇಶ ಭಟ್ಟ ಅವರ ಮಾಲಕತ್ವದಲ್ಲಿದ್ದಾಗ ಅದರ ಉಸ್ತುವಾರಿಯನ್ನು ಹರೆರಾಮ ಭಟ್ಟ ನೋಡಿಕೊಳ್ಳುತ್ತಿದ್ದರು. ಅವರು ಅಂಕೋಲಾದಲ್ಲಿ ವಾಸವಾಗಿದ್ದರು.  ಪ್ರಸ್ತುತ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ 1 ತಿಂಗಳಿನಿoದ ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಹರೆರಾಮ ಭಟ್ಟ ಅವರು ಅಂಕೋಲಾದಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಸಂಜೆ ಅವರ ಮೆದುಳು ನಿಷ್ಕಿಯಗೊಂಡಿದ್ದು, ಗುರುವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಯಲ್ಲಾಪುರ ತಾಲೂಕಿನ ಬಿದ್ರೆಮನೆಯ ಮೈತ್ರಿ ಎಂಬಾತರನ್ನು ಅವರು ವರಿಸಿದ್ದು, ಪುಟ್ಟ ಮಗುವನ್ನು ಅಗಲಿದ್ದಾರೆ.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page