6

ಭಾನುವಾರ 59 ಸಂತ್ರಸ್ತರಿಗೆ ಆಶ್ರಯ ನೀಡಿದ ಕಾಳಜಿ ಕೇಂದ್ರ..

ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಹೊನ್ನಾವರದಲ್ಲಿ 2 ಕಾಳಜಿ ಕೇಂದ್ರಗಳಲ್ಲಿ 59 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
`ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬ0ಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 3 ಮನೆಗಳಿಗೆ ತೀವ್ರ ಹಾನಿ ಹಾಗೂ 4 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯ ಗುಂದ, ಚಿಟ್ಟಿಹಿತ್ಲ, ದೇವದಳ್ಳಿಯ ನೇರಪೀಡಿತ ಪ್ರದೇಶದಲ್ಲಿ 13 ಕುಟುಂಬಗಳನ್ನು ಓಆಖಈ ತಂಡದ ಮೂಲಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ’ ಎಂದವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page