6

ಭಾರೀ ಮಳೆ: ಮತ್ತೆ 12 ಮನೆಗಳಿಗೆ ಹಾನಿ

ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸೋಮವಾರ ಸಂಜೆಯಿoದ ಮಂಗಳವಾರ ಸಂಜೆಯವರೆಗೆ 12 ಮನೆಗಳಿಗೆ ಹಾನಿಯಾಗಿದೆ. ಅದರಲ್ಲಿ 2 ಮನೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ.
ಮಂಗಳವಾರ ಮಳೆ ಪ್ರಮಾಣ ಕಡಿಮೆ ಆಗಿದ್ದು ಹೊನ್ನಾವರ ತಾಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಈ ಐದು ಕಾಳಜಿ ಕೇಂದ್ರಗಳಲ್ಲಿ 150 ಮಂದಿ ಆಶ್ರಯ ಪಡೆದಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಜಿಲ್ಲಾಡಳಿತ ಊಟ, ವಸತಿ ನೀಡಿ ಆರೋಗ್ಯ ತಪಾಸಣೆ ನಡೆಸಿದೆ.
ಮಳೆಯಿಂದ ತೊಂದರೆಗೆ ಒಳಗಾದವರು 1077 ಅಥವಾ 9483511015 ಕರೆ ಮಾಡಿ ಸಮಸ್ಯೆ ಹೇಳಬಹುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page