6

ಮುಂಗಾರು ಮಳೆಯೇ.. ಏನು ನಿನ್ನ ಹನಿಗಳ ಲೀಲೆ…

ಕರಾವಳಿಯಲ್ಲಿ ಮುಂಗಾರು ಮಳೆ ಜೋರಾಗಿದೆ. ಹೊನ್ನಾವರ – ಕುಮಟಾ ಭಾಗದ ಹಲವು ಭಾಗಗಳು ಜಲಾವೃತಗೊಂಡಿದ್ದು, ಜನರಿಗೆ ಕಾಳಜಿ ಕೇಂದ್ರ ಅನಿವಾರ್ಯವಾಗಿದೆ.
ಆರು ದಿನದಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಹಳ್ಳಗಳು ತುಂಬಿ ಹರಿಯುತ್ತಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗುತ್ತಿದ್ದು, ನದಿ ತೀರದ ತೋಟಗಳು ಜವಳಿಗೆ ನಲುಗಿದೆ. ಐಆರ್‌ಬಿ ಕಂಪನಿಯ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತ ಸಾಮಾನ್ಯವಾಗಿದೆ. ಇದರ ಜೊತೆ ಹೆದ್ದಾರಿಯುದ್ದಕ್ಕೂ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ. ವಿದ್ಯುತ್ ತಂತಿಗಳ ಮರ ಬೀಳುವುದು, ವಿದ್ಯುತ್ ಕಡಿತ ಸಾಮಾನ್ಯವಾಗಿದೆ.
ಹೊನ್ನಾವರದ ಗುಂಡಬಾಳ, ಭಾಸ್ಕೇರಿ, ಬಡಗಣೆ ಹೊಳೆಯ ನದಿ ತೀರ ಪ್ರದೇಶದ ಹಲವು ಮನೆಗಳು ಜಲಾವೃತಗೊಂಡಿದ್ದು, ಅನೇಕರು ಸಂಬAಧಿಕರ ಮನೆಗೆ ಹೋಗಿದ್ದಾರೆ. ಇನ್ನೂ ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಗುಂಡಿಬೈಲ್, ಹರಡಸೆ, ಹಾಡಗೇರಿ, ಹಡಿನಬಾಳ, ಮುಟ್ಟಾ, ಕಡಗೇರಿ, ಖರ್ವಾ ಭಾಸ್ಕೇರಿ, ಗಜನಿಕೇರಿ ಊರಿನ ಸುತ್ತಲು ನೀರು ನಿಂತಿದ್ದು, ಪ್ರವೇಶ ಅಸಾಧ್ಯ ಎಂಬAತಾಗಿದೆ. ಅಡಿಕೆ ಮರದ ಬುಡದಲ್ಲಿ ನೀರು ನಿಂತಿದ್ದರಿAದ ಕೊಳೆರೋಗ ಕಾಡುತ್ತಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page