6

ಮಳೆ ಜೊತೆ ಮುಂದುವರೆದ ರೆಡ್ ಅಲರ್ಟ: ಜುಲೈ 19ಕ್ಕೂ ಶಾಲಾ-ಕಾಲೇಜಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದ ಮಳೆ ಮುಂದುವರೆದಿದ್ದು, ಶಾಲಾ ಕಾಲೇಜುಗಳಿಗೆ ಘೋಷಿಸಿದ್ದ ರಜೆಯನ್ನು ಜುಲೈ 19ಕ್ಕೂ ಮುಂದುವರೆಸಲಾಗಿದೆ.  ಹೀಗಾಗಿ ಈ ಶುಕ್ರವಾರ ಮಕ್ಕಳು ಹಾಗೂ ಶಿಕ್ಷಕರು ಶಾಲೆಗೆ ಬರಬೇಕಾಗಿಲ್ಲ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ಹಳಿಯಾಳ, ಮುಂಡಗೋಡು ಹಾಗೂ ದಾಂಡೇಲಿ ಭಾಗದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಹಾಗೂ ಐಟಿಐ ಕಾಲೇಜುಗಳಿಗೆ ಈ ರಜೆ ಘೋಷಣೆಯಾಗಿದೆ. ಈಗ ನೀಡಿರುವ ರಜೆಯ ಬದಲು ಬೇಸಿಗೆಯಲ್ಲಿ ಹೆಚ್ಚುವರಿಯಾಗಿ ತರಗತಿ ನಡೆಸಬೇಕು ಎಂದು ಸೂಚಿಸಲಾಗಿದೆ. ಮಕ್ಕಳ ವಿದ್ಯಾಬ್ಯಾಸಕ್ಕೆ ಯಾವುದೇ ಹಿನ್ನಡೆ ಆಗದಂತೆ ಕ್ರಮ ಜರುಗಿಸಲು ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶುಕ್ರವಾರ ಮುಂಡಗೋಡು ಹಾಗೂ ಹಳಿಯಾಳ ತಾಲೂಕಿಗೆ ಸಹ `ಮಳೆ ರಜೆ’ಯ ಭಾಗ್ಯ ದೊರೆತಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page